ಕಲಬುರಗಿ: ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಸಮಾಜ ಸೇವಕ ಜೆ.ಎಂ.ಕೊರಬು ವಿರುದ್ಧ ಅಫಜಲಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕೋವಿಡ್ ನಿಯಮ ಉಲ್ಲಂಘನೆ ಆರೋಪ: ಸಮಾಜ ಸೇವಕ ಕೊರಬು ವಿರುದ್ಧ ಎಫ್‌ಐಆರ್ - Kalburgi
ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಸಮಾಜ ಸೇವಕ ಜೆ.ಎಂ.ಕೊರಬು ಸೇರಿ 50 ಜನರ ವಿರುದ್ಧ ಅಫಜಲಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎರಡು ದಿನಗಳ ಹಿಂದೆ ಹುಟ್ಟುಹಬ್ಬ ಆಚರಿಸಿಕೊಂಡ ಕೊರಬು, ಒಂದು ಇಂಡಿಕಾ ಹಾಗೂ ಒಂದು ಟವೇರಾ ವಾಹನವನ್ನು ಆ್ಯಂಬುಲೆನ್ಸ್ಗಳನ್ನಾಗಿ ಪರಿವರ್ತಿಸಿ ಕೊರೊನಾ ಪೀಡಿತ ಸಾರ್ವಜನಿಕರ ಸೇವೆಗೆ ನೀಡಿದ್ದರು. ವಾಹನ ಲೋಕಾರ್ಪಣೆ ಹಿನ್ನೆಲೆ ಅಫಜಲಪುರ ತಾಲೂಕು ಆಸ್ಪತ್ರೆ ಮುಂದೆ ಸುಮಾರು 50 ಜನರನ್ನು ಸೇರಿಸಿ ಕಾರ್ಯಕ್ರಮ ನಡೆಸಿದ್ದರು. ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸಂಪೂರ್ಣವಾಗಿ ಲಾಕ್‌ಡೌನ್ ನಿಯಮ ಉಲ್ಲಂಘನೆ ಮಾಡಲಾಗಿತ್ತು ಎನ್ನಲಾಗಿದೆ.
ಈ ಹಿನ್ನೆಲೆ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಜೆ.ಎಂ.ಕೊರಬು ಸೇರಿ 50 ಜನರ ವಿರುದ್ಧ ಅಫಜಲಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.