ಕರ್ನಾಟಕ

karnataka

ETV Bharat / state

ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಸಿದ ಸಿಪಿಐಎಂ - ಸುಗ್ರೀವಾಜ್ಞೆ ವಾಪಸ್ ಪಡೆಯಬೇಕೆಂದು ಆಗ್ರಹ

ಎಪಿಎಂಸಿ ಕಾಯ್ದೆ ರೈತರ ಮರಣ ಶಾಸನವಾಗಿದೆ. ಕೂಡಲೇ ಕಾಯ್ದೆ ತಿದ್ದುಪಡಿ ವಾಪಸ್ ಪಡೆಯಬೇಕು ಹಾಗೂ ಸುಗ್ರೀವಾಜ್ಞೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಸಿಪಿಐಎಂ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

cpim-protests-against-amendment-of-apmc-act-at-kalburagi
ಸಿಪಿಐಎಂ ನೇತೃತ್ವದಲ್ಲಿ ಪ್ರತಿಭಟನೆ

By

Published : May 20, 2020, 10:03 PM IST

ಕಲಬುರಗಿ: ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧಿಸಿ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಸಿಪಿಐಎಂ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟಿಸಿದ ಸಿಪಿಐಎಂ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ರೈತ ವಿರೋಧಿ ನೀತಿಯನ್ನು ಖಂಡಿಸಿದರು. ಎಪಿಎಂಸಿ ಕಾಯ್ದೆ ರೈತರ ಮರಣ ಶಾಸನವಾಗಿದೆ. ಕೂಡಲೇ ಕಾಯ್ದೆ ತಿದ್ದುಪಡಿ ವಾಪಸ್ ಪಡೆಯಬೇಕು. ಹಾಗೂ ಸುಗ್ರೀವಾಜ್ಞೆ ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಮತ್ತೊಂದೆಡೆ ಕಾಯ್ದೆ ವಿರೋಧಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಜೇವರ್ಗಿಯ ತಹಶೀಲ್ದಾರ್​​ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ABOUT THE AUTHOR

...view details