ಕರ್ನಾಟಕ

karnataka

ETV Bharat / state

ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಚಾಕಲೇಟ್​ ಆಸೆ ತೋರಿಸಿ ಅಪ್ರಾಪ್ತರಿಂದ ಅತ್ಯಾಚಾರ! - ETV Bharath Kannada news

ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಚಾಕಲೇಟ್​ನ ಆಸೆ ತೋರಿಸಿ ಅಪ್ರಾಪ್ತರು ಅತ್ಯಾಚಾರ ನಡೆಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.

crime news minor girl was raped by three minors in Kalaburagi
crime news minor girl was raped by three minors in Kalaburagi

By

Published : Jul 7, 2023, 1:11 PM IST

Updated : Jul 7, 2023, 4:46 PM IST

ಕಲಬುರಗಿ: ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಚಾಕೊಲೇಟ್ ಕೊಡಿಸುವ ಆಸೆ ತೋರಿಸಿ ಮನೆಗೆ ಕರೆದೊಯ್ದು ಮೂವರು ಅಪ್ರಾಪ್ತರೇ ಸೇರಿ ಅತ್ಯಾಚಾರವೆಸಗಿದ ಘಟನೆ ನಗರದ ಮಹಿಳಾ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬುಧವಾರ ಕೆಲಸಕ್ಕೆ ರಜೆ ತೆಗೆದುಕೊಂಡು ಮನೆಯಲ್ಲಿದ್ದ ತನ್ನ ತಾಯಿಯ ಜೊತೆ ಮಗು ಮನೆಯಲ್ಲಿತ್ತು.‌ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮನೆ ಮುಂದೆ ಆಟವಾಡುತ್ತಿದ್ದಾಗ ಮೂವರು ಬಾಲಕರು ಆಕೆಗೆ ಚಾಕೊಲೇಟ್ ಕೊಡಿಸುವುದಾಗಿ ಹೇಳಿ ಹತ್ತು ರೂಪಾಯಿ ಕೈಗಿಟ್ಟು‌ ಪುಸಲಾಯಿಸಿ ಹತ್ತಿರದ ಮನೆಯ ಕೋಣೆಯೊಂದಕ್ಕೆ ಕರೆದೊಯ್ದು ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ಬಾಲಕಿ ಅಳುತ್ತಾ ಭಯದಲ್ಲಿ ಮನೆಗೆ ಬಂದಾಗ ಅನುಮಾನಗೊಂಡ ತಾಯಿ ವಿಚಾರಿಸಿದ್ದು ಬಾಲಕಿ ಎಲ್ಲವನ್ನೂ ವಿವರಿಸಿದ್ದಾಳೆ. ಮಗುವನ್ನು ಪೋಷಕರು ಪಕ್ಕದ ಮನೆಗೆ ಕರೆದುಕೊಂಡು ಹೋದಾಗ ಮನೆ ಕೀಲಿ ಹಾಕಲಾಗಿತ್ತು. ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ‌ ಕುರಿತು ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಬಾಲಕರನ್ನು ಬಾಲ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ:Rape on minor girl: ಸ್ಕೂಟಿ ಕಲಿಸುವುದಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ : ಕಾಮುಕನ ಬಂಧನ

ಚಾಕೊಲೇಟ್​ ಕೊಡಿಸುವುದಾಗಿ ಕರೆದೊಯ್ದು ದುಷ್ಕೃತ್ಯ:ಕಳೆದ ತಿಂಗಳು ಜೂನ್ 19 ರಂದು ಸಿಂಧನೂರಿನಲ್ಲಿ ಇಂತಹದ್ದೇ ಒಂದು ಘಟನೆ ನಡೆದಿದೆ.​ 4ನೇ ತರಗತಿ ಓದುತ್ತಿರುವ ಬಾಲಕಿ ಎಂದಿನಂತೆ ಮನೆಯಲ್ಲಿ ಊಟ ಮಾಡಿ ಶಾಲೆಗೆ ಹೋಗಲು ಸಿದ್ಧವಾಗಿ ಮನೆಯ ಮುಂದೆ ಆಟವಾಡುತ್ತಿದ್ದಳು. ಈ ವೇಳೆ ಸಪನ್ ಮಂಡಲ್ ಎಂಬಾತ ಬಾಲಕಿಯನ್ನು ಚಾಕೊಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಮನೆಯಂಗಳದಿಂದ ಕರೆದುಕೊಂಡು ಹೋಗಿದ್ದಾನೆ. ಆತನ ಬಳಿ ಸ್ಕೂಟಿ ಇದ್ದು, ಅದನ್ನು ಕಲಿಸುವುದಾಯೂ ಹೇಳಿದ್ದಾನೆ. ಸ್ಕೂಟಿ ಕಲಿಸುತ್ತೇನೆ ಎಂದು ನಿರ್ಜನ ಪ್ರದೇಶವೊಂದಕ್ಕೆ ಕರೆದುಕೊಂಡು ಹೋಗಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕೃತ್ಯದ ಬಳಿಕ ಆರೋಪಿಯು ಬಾಲಕಿಯನ್ನು ಮನೆಯಿಂದ ತುಸು ದೂರ ಬಿಟ್ಟು ಪರಾರಿಯಾಗಿದ್ದಾನೆ.

ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿ ಏಕಾಏಕಿ ಆಳುತ್ತ ಮನೆಗೆ ಬರುತ್ತಿರುವುದನ್ನು ಕಂಡ ಪೋಷಕರು ಗಾಬರಿಗೊಂಡು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಬಾಲಕಿಯ ಪೋಷಕರು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೋಕ್ಸೋ ಕೇಸ್​ ದಾಖಲು.. ಪ್ರಕರಣ ಸಂಬಂಧ ತನಿಖೆ ನಡೆಸಿದ ಪೊಲೀಸರಿಗೆ ಆರೋಪಿ ಕೃತ್ಯವೆಸಗಿ ಸಿಂಧನೂರು ನಗರದಲ್ಲಿ ತಲೆಮರೆಸಿಕೊಂಡಿರುವುದು ಗೊತ್ತಾಗಿದೆ. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆ ಪಿಎಸ್‌ಐ ಕೆ. ಎಚ್. ಮಣಿಕಂಠ ನೇತೃತ್ವದ ತಂಡ ಆರೋಪಿಯನ್ನು ಸೆರೆ ಹಿಡಿದಿದ್ದಾರೆ.

ಇದನ್ನೂ ಓದಿ:ಖಾಸಗಿ ಶಾಲೆಯ ಬಾಲಕಿಯರ ವಾಶ್ ರೂಂನಲ್ಲಿ ಸಿಸಿಟಿವಿ ಕ್ಯಾಮರಾ! ಪ್ರಾಂಶುಪಾಲರಿಗೆ ಪೋಷಕರಿಂದ ಥಳಿತ

Last Updated : Jul 7, 2023, 4:46 PM IST

ABOUT THE AUTHOR

...view details