ಕಲಬುರಗಿ:ಮಳೆರಾಯನ ಆರ್ಭಟಕ್ಕೆ ಕಲಬುರಗಿ ಜಿಲ್ಲೆ ಮತ್ತೆ ಅಕ್ಷರಶಃ ನಲುಗಿ ಹೋಗಿದೆ. ಜಿಲ್ಲಾದ್ಯಂತ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಇಲ್ಲಿನ ಜನ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕೆಲ ದಿನಗಳಿಂದ ಬಿಡುವು ನೀಡಿದ್ದ ವರುಣ ಕಳೆದೆರಡು ದಿನಗಳಿಂದ ಮತ್ತೆ ಅಬ್ಬರಿಸುತ್ತಿದ್ದಾನೆ. ರಾತ್ರಿಯಿಡಿ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿಯೂ ಸಹ ಭಾರಿ ಪ್ರಮಾಣದ ಮಳೆ ಸುರಿದಿದ್ದು, ಸುತ್ತಮುತ್ತಲಿನ ಹಳ್ಳಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ತುಂಬಿ ಹರಿಯುತ್ತಿರುವ ಹಳ್ಳ ದಾಟಲು ವಾಹನ ಸವಾರರು ಹರಸಾಹಸ ಪಡುತ್ತಿದ್ದಾರೆ. ಇತ್ತ ಶಾಲಾ-ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪರದಾಡುತ್ತಿರುವ ದೃಶ್ಯ ಕಂಡು ಬಂದಿವೆ.