ಕಲಬುರಗಿ:ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೇರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕಲ್ಬುರ್ಗಿಯಲ್ಲಿ ಸೈಕಲ್ ಜಾಥಾ ನಡೆಸಿದರು.
ತೈಲ ದರ ಖಂಡಿಸಿ ಕಲಬುರಗಿಯಲ್ಲೂ ಸೈಕಲ್ ಜಾಥಾ ನಡೆಸಿದ ಕಾಂಗ್ರೆಸಿಗರು! - ಜೇವರ್ಗಿ ಶಾಸಕ ಅಜಯ್ ಸಿಂಗ್
ಮಾಜಿ ಸಚಿವ ಶರಣ ಪ್ರಕಾಶ್ ಪಾಟೀಲ್ ಹಾಗೂ ಜೇವರ್ಗಿ ಶಾಸಕ ಅಜಯ್ ಸಿಂಗ್ ನೇತೃತ್ವದಲ್ಲಿ ನಗರದ ಪ್ರಮುಖ ರಸ್ತೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೈಕಲ್ ಜಾಥಾ ನಡೆಸಿದರು.
ಸೈಕಲ್ ಜಾಥಾ
ಮಾಜಿ ಸಚಿವ ಶರಣ ಪ್ರಕಾಶ್ ಪಾಟೀಲ್ ಹಾಗೂ ಜೇವರ್ಗಿ ಶಾಸಕ ಅಜಯ್ ಸಿಂಗ್ ನೇತೃತ್ವದಲ್ಲಿ ನಗರದ ಪ್ರಮುಖ ರಸ್ತೆಯಲ್ಲಿ ಸೈಕಲ್ ಜಾಥಾ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಡೀಸೆಲ್ ಹಾಗೂ ಪೆಟ್ರೋಲ್ ಬೆಲೆ ಕಡಿಮೆಗೊಳಿಸುವಂತೆ ಒತ್ತಾಯಿಸಿದರು.
ಜಾಥಾದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರಾದ ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.