ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡಿದ್ದು, ಸ್ಪಲ್ಪದರಲ್ಲಿಯೇ ಹಲವರು ಪ್ರಾಣಪಾಯದಿಂದ ಪಾರಾಗಿರುವ ಘಟನೆ ಕಾಳಗಿ ತಾಲೂಕಿನ ಹೊಸಳ್ಳಿ ಕ್ರಾಸ್ ಬಳಿ ನಡೆದಿದೆ.
ಸಿಲಿಂಡರ್ ಸ್ಫೋಟ: ತಪ್ಪಿದ ಭಾರಿ ಅನಾಹುತ
ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ಹೊಸಳ್ಳಿ ಕ್ರಾಸ್ ಬಳಿಯ ಸಣ್ಣ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಯಾವುದೇ ಸಾವು, ನೋವು ಸಂಭವಿಸಿಲ್ಲ. ಈ ಸಂಬಂಧ ರಟಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಣ್ಣ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟ
ಇಲ್ಲಿನ ದಶರತ್ ಮುಖರಂಬಿ ಎಂಬುವವರಿಗೆ ಸೇರಿದ ಸಣ್ಣ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಇದರ ರಬಸಕ್ಕೆ ಅಂಗಡಿಯ ತಗಡಿನ ಮೇಲ್ಛಾವಣಿ ಸಂಪೂರ್ಣ ಚಿದ್ರಗೊಂಡಿದೆ. ಸಿಲಿಂಡರ್ ಗ್ಯಾಸ್ ಸೋರಿಕೆಯಿಂದ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಲ್ಲರೂ ಹೊರಗೆ ಬಂದಿದ್ದಾರೆ. ನಂತರ ಕ್ಷಣಾರ್ಧದಲ್ಲಿ ಬಾರಿ ಪ್ರಮಾಣದ ಸ್ಫೋಟ ಸಂಭವಿಸಿದೆ.
ಅದೃಷ್ಟವಶಾತ್ ಯಾವುದೇ ಸಾವು, ನೋವು ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸುತ್ತಿದ್ದಾರೆ. ಈ ಕುರಿತು ರಟಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.