ಕಲಬುರಗಿ:ಕರ್ನಾಟಕ ರಾಜ್ಯದಲ್ಲಿ ನಕಲಿ ವೀರಶೈವ - ಲಿಂಗಾಯತ ಸ್ವಾಮೀಜಿಗಳಿಗೆ ಬೇಡ ಜಂಗಮ ಪ್ರಮಾಣ ಪತ್ರ ಕೊಡುತ್ತಿರುವ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ದಲಿತ ಮುಖಂಡ ಗುರುಶಾಂತ ಪಟ್ಟೇದಾರ ಆಗ್ರಹಿಸಿದ್ದಾರೆ.
ಬೇಡ ಜಂಗಮ ಪ್ರಮಾಣ ಪತ್ರ ನೀಡುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ದಸಂಸ ಒತ್ತಾಯ - ದಲಿತ ಮುಖಂಡ ಗುರುಶಾಂತ ಪಟ್ಟೇದಾರ
ಬೇಡ ಜಂಗಮ ಪ್ರಮಾಣ ಪತ್ರ ಕೊಡುತ್ತಿರುವ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ದಲಿತ ಮುಖಂಡ ಗುರುಶಾಂತ ಪಟ್ಟೇದಾರ ಆಗ್ರಹಿಸಿದ್ದಾರೆ.
ದಲಿತ ಮುಖಂಡ ಗುರುಶಾಂತ ಪಟ್ಟೇದಾರ
ನಗರದಲ್ಲಿ ಮಾತನಾಡಿದ ಅವರು, ನಕಲಿ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಬೇಡ ಜಂಗಮ ಪ್ರಮಾಣ ಪತ್ರ ಪಡೆದು ಮೀಸಲಾತಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ಸಂಬಂಧ ಕೂಡಲೇ ನಕಲಿ ಜಾತಿ ಪ್ರಮಾಣ ಪತ್ರ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.