ಕಲಬುರಗಿ: ಚಿತ್ತಾಪುರ ತಾಲೂಕಿನ ಬಾಗೋಡಿ ಗ್ರಾಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿರುವುದನ್ನು ಖಂಡಿಸಿ, ಆರೋಪಿಗಳನ್ನು ಬಂಧಿಸುವಂತೆ ಗ್ರಾಮಸ್ಥರು ಬೃಹತ್ ಪ್ರತಿಭಟನೆ ನಡೆಸಿದ್ರು.
ದಲಿತ ಸೇನೆ ನೇತೃತ್ವದಲ್ಲಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಗ್ರಾಮಸ್ಥರು, ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದರು.