ಕಲಬುರಗಿ:ಇದೇ ನವೆಂಬರ್ನಲ್ಲಿವಿಮಾನ ನಿಲ್ದಾಣಲೋಕಾರ್ಪಣೆಗೊಳ್ಳಲಿರುವ ಹಿನ್ನೆಲೆ ಜಿಲ್ಲಾಧಿಕಾರಿ ಬಿ.ಶರತ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಕಲಬುರಗಿ ನೂತನ ವಿಮಾನ ನಿಲ್ದಾಣಕ್ಕೆ ಡಿಸಿ ಭೇಟಿ, ಪರಿಶೀಲನೆ
ಕಲಬುರಗಿಯಲ್ಲಿ ನೂತನವಾಗಿ ನಿರ್ಮಾಣವಾದ ವಿಮಾನ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಬಿ.ಶರತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Kalaburagi airport
ಶ್ರೀನಿವಾಸ್ ಸರಡಗಿ ಬಳಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಡಿಸಿ ಬಿ.ಶರತ್ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಸಿಎಂ ಕಾರ್ಯಕ್ರಮದ ಬೃಹತ್ ವೇದಿಕೆ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಇನ್ನಿತರ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಈ ಸಂದರ್ಭ ಡಿಸಿಪಿ ಕಿಶೋರ್ ಬಾಬು, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಸೇರಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.