ಕಲಬುರಗಿ:ಅಫಜಲಪುರ ತಾಲೂಕಿನ ಸೊನ್ನ ಬ್ಯಾರೇಜ್ನಿಂದ ಮತ್ತೆ ಹೆಚ್ಚಿನ ನೀರು ಹೊರ ಬಿಡಲಾಗಿದ್ದು, ನದಿ ಪಾತ್ರದ ಜನರು ತಕ್ಷಣ ಗ್ರಾಮ ಖಾಲಿ ಮಾಡುವಂತೆ ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ಸೂಚಿಸಿದ್ದಾರೆ.
ಸೊನ್ನ ಬ್ಯಾರೇಜ್ನಿಂದ ನೀರು ಬಿಡುಗಡೆ: ಗ್ರಾಮ ಖಾಲಿ ಮಾಡುವಂತೆ ನದಿ ಪಾತ್ರದ ಜನರಿಗೆ ಡಿಸಿ ಸೂಚನೆ - DC instructs to empty the village in Kalaburgi
ಜಿಲ್ಲೆಯ ಭೀಮಾ ಹಾಗೂ ಕಾಗಿಣಾ ನದಿ ತೀರದ ದಂಡೆಯ ಅಫಜಲಪುರ, ಜೇವರ್ಗಿ, ಚಿತ್ತಾಪುರ ಹಾಗೂ ಶಹಾಬಾದ್ ತಾಲೂಕಿನ ಗ್ರಾಮಸ್ಥರು ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ಸೂಚಿಸಿದ್ದಾರೆ.
ಭೀಮಾ ನದಿಗೆ 8 ಲಕ್ಷ ಕ್ಯೂಸೆಕ್ ನೀರು ಬಿಡಲಾಗಿದ್ದು, ಇನ್ನೂ ಹೆಚ್ಚಿನ ನೀರು ಬಿಡುವ ಸಾಧ್ಯತೆಯಿದೆ. ಇದು ಭೀಕರ ಪ್ರವಾಹದ ಮುನ್ಸೂಚನೆಯಾಗಿದೆ. ಜಿಲ್ಲೆಯ ಭೀಮಾ ಹಾಗೂ ಕಾಗಿಣಾ ನದಿ ತೀರದ ದಂಡೆಯ ಅಫಜಲಪುರ, ಜೇವರ್ಗಿ, ಚಿತ್ತಾಪುರ ಹಾಗೂ ಶಹಾಬಾದ್ ತಾಲೂಕಿನ ಗ್ರಾಮಸ್ಥರು ಕೂಡಲೇ ಸುರಕ್ಷಿತ ಸ್ಥಳಕ್ಕೆ ತೆರಳಬೇಕು. ಪ್ರವಾಹದಲ್ಲಿ ಸಿಲುಕಿರುವವರ ಸಂರಕ್ಷಣೆಗೆ ಈಗಾಗಲೇ 2 ಎನ್ಡಿಆರ್ಎಫ್ ತಂಡಗಳು ಪ್ರವಾಹ ಪೀಡಿತ ಪ್ರದೇಶದಲ್ಲಿ ಕಾರ್ಯೋನ್ಮುಖವಾಗಿವೆ ಎಂದು ತಿಳಿಸಿದ್ದಾರೆ.
ಇದಲ್ಲದೆ ಎಸ್ಡಿಆರ್ಎಫ್, ಪೊಲೀಸ್ ಹಾಗೂ ಅಗ್ನಿಶಾಮಕ ದಳ ತಂಡಗಳು ಕ್ಷೇತ್ರದಲ್ಲಿ 24 ಗಂಟೆ ಕಾಲ ಜನರ ಸಂರಕ್ಷಣೆಗೆ ಕಾರ್ಯನಿರ್ವಹಿಸುತ್ತಿದ್ದಾರೆ. ಇದಲ್ಲದೆ ಆರ್ಮಿ ಮತ್ತು ಏರ್ ಫೋರ್ಸ್ ತಂಡಗಳು ಜಿಲ್ಲೆಗೆ ಬರಲಿವೆ. ಹೀಗಾಗಿ ಸಾರ್ವಜನಿಕರು ಯಾವುದೇ ಭಯ ಮತ್ತು ಆತಂಕಕ್ಕೆ ಒಳಗಾಗಬಾರದು. ರಕ್ಷಣಾ ಕಾರ್ಯಕ್ಕೆ ಅಗತ್ಯ ಸಹಕಾರ ನೀಡುವಂತೆ ವಿ.ವಿ.ಜ್ಯೋತ್ಸ್ನಾ ಮನವಿ ಮಾಡಿದ್ದಾರೆ.