ಕಲಬುರಗಿ: ಮನೆಯಲ್ಲೇ ಕುಳಿತು ಕೆಲಸ ಮಾಡಿದ್ರೆ ಮುಲಾಜಿಲ್ಲದೆ ಮನೆಗೇ ಕಳುಹಿಸುತ್ತೇನೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.
ಅಸಡ್ಡೆ ತೋರಿದರೆ ಎತ್ತಂಗಡಿ: ಜಿಲ್ಲಾಧಿಕಾರಿಗಳಿಗೆ ಆರ್. ಅಶೋಕ್ ಖಡಕ್ ಎಚ್ಚರಿಕೆ - dcs will transfer if they dont handle flood situation r ashok strictly warning
ಹಣದ ಕೊರತೆ ಬರದೆ ಇರೋ ಹಾಗೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಈಗಾಗಲೇ ಈ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡ್ತಿದ್ದೇವೆ. ಅಧಿಕಾರಿಗಳು ಫಿಲ್ಡ್ಗೆ ಇಳಿದು ಕೆಲಸ ಮಾಡಬೇಕು, ಮನೆಯಲ್ಲೇ ಕುಳಿತು ಕೆಲಸ ಮಾಡಿದರೆ ಮುಲಾಜಿಲ್ಲದೆ ಮನೆಗೆ ಕಳುಹಿಸುತ್ತೇನೆ ಎಂದು ಕಂದಾಯ ಸಚಿವ ಆರ್ ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಆಗಮಿಸಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಹಣದ ಕೊರತೆ ಬರದ ಹಾಗೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡ್ತಿದ್ದೇವೆ. ಅಧಿಕಾರಿಗಳು ಫೀಲ್ಡ್ಗೆ ಇಳಿದು ಕೆಲಸ ಮಾಡಬೇಕು, ಮನೆಯಲ್ಲೇ ಕುಳಿತು ಕೆಲಸ ಮಾಡುವಂತಿಲ್ಲ ಎಂದರು.
ಅಲ್ಲದೆ ಸೋಮಾರಿತನ ಮಾಡಿದರೆ ಅಂತಹವರನ್ನು ಎತ್ತಂಗಡಿ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ. ಹಿಂದೆ ಅಧಿಕಾರದಲ್ಲಿದ್ದವರು ಏನು ಮಾಡಿದ್ದಾರೆ ಎಂಬುದು ಗೊತ್ತಿದೆ. ವಿರೋಧ ಮಾಡುವುದೇ ಪ್ರತಿಪಕ್ಷದವರ ಕೆಲಸ ಎಂದು ಸಿದ್ದರಾಮಯ್ಯ ಅವರಿಗೆ ಸಚಿವ ತಿರುಗೇಟು ನೀಡಿದ್ದಾರೆ.