ಕಲಬುರಗಿ: ನನಗೆ ಈಗಾಗಲೇ ಬಿಜೆಪಿ ಟಿಕೆಟ್ ಪ್ರಕಟಿಸಲಾಗಿದೆ. ಜನರಲ್ಲಿ ಗೊಂದಲ ಮೂಡಿಸುವ ನಿಟ್ಟಿನಲ್ಲಿ ಈ ರೀತಿ ಮಾತುಗಳನ್ನಾಡಲಾಗುತ್ತಿದೆ ಎಂದು ಕಲಬುರಗಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ವಿಶ್ವಾಸ ವ್ಯಕ್ತಪಡಿಸಿದರು.
ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿಯೇ ತೀರುತ್ತೇನೆ: ಉಮೇಶ್ ಜಾಧವ್ - ಬಿಜೆಪಿ
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಚಿಂಚೋಳಿ ಶಾಸಕ ಉಮೇಶ ಜಾಧವ್, ಈ ಬಾರಿಯ ಕಲಬುರಗಿ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿದ್ದಾರೆ.
ಖರ್ಗೆ ವಿರುದ್ಧ ಜಾಧವ ಸ್ಪರ್ಧೆ ಬಹುತೇಕ ಖಚಿತ
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಈಗಾಗಲೇ ಬಿಜೆಪಿ ಟಿಕೆಟ್ ಪಕ್ಕಾ ಆಗಿದೆ. ಸ್ಪರ್ಧೆ ವಿಷಯದಲ್ಲಿ ಯಾವುದೇ ಗೊಂದಲವಿಲ್ಲ. ನಾನು ಈಗಾಗಲೇ ರಾಜೀನಾಮೆ ನೀಡಿದ್ದೇನೆ. ಅನರ್ಹತೆಯ ಪ್ರಶ್ನೆಯೇ ಬರುವುದಿಲ್ಲ. ಒಂದು ವೇಳೆ ಏನಾದರೂ ಅನರ್ಹಗೊಳಿಸುವ ಕುತಂತ್ರ ಮಾಡಿದರೂ ನಾನು ಹೆದರುವುದಿಲ್ಲ. ಲೋಕಸಭೆಗೆ ಸ್ಪರ್ಧಿಸಿಯೇ ತೀರುತ್ತೇನೆ. ಜನರಲ್ಲಿ ಗೊಂದಲ ಮೂಡಿಸುವ ಉದ್ದೇಶದಿಂದ ಈ ರೀತಿ ಅಪಪ್ರಚಾರ ಮಾಡಲಾಗುತ್ತಿದೆ. ಸ್ಪೀಕರ್ ರಮೇಶ್ ಕುಮಾರ್ ಪಕ್ಷಾತೀತರು. ಅವರು ಒಂದು ಜಡ್ಜ್ ಸ್ಥಾನದಲ್ಲಿದ್ದಾರೆ. ನನಗೆ ನ್ಯಾಯ ಕೊಡುತ್ತಾರೆ ಎಂಬ ವಿಶ್ವಾಸವಿದೆ. ಒಂದು ವೇಳೆ ಶಾಸಕ ಸ್ಥಾನದಿಂದ ಅನರ್ಹಗೊಳಿಸಿದರೂ ಲೋಕಸಭೆಗೆ ಸ್ಪರ್ಧಿವೆ ಎಂದು ತಿಳಿಸಿದರು.