ಕಲಬುರಗಿ:ಹೈದರಾಬಾದ್ ಕರ್ನಾಟಕದಲ್ಲಿ ಸಕಾಲಕ್ಕೆ ಮಳೆ ಸುರಿಯದೆ ಇಲ್ಲಿನ ಜನ ಸಂಕಷ್ಟದಲ್ಲಿದ್ದು ತಕ್ಷಣ ಸರ್ಕಾರ ಮೋಡ ಬಿತ್ತನೆ ಮಾಡಬೇಕೆಂದು ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಗುರುಶಾಂತ ಪಟ್ಟೇದಾರ ಆಗ್ರಹಿಸಿದ್ದಾರೆ.
ಹೈದರಾಬಾದ್ ಕರ್ನಾಟಕದಲ್ಲಿ ಬರ ತಾಂಡವ.. ಮೋಡ ಬಿತ್ತನೆಗೆ ಆಗ್ರಹ - ಕಲಬುರಗಿ
ಬರದಿಂದ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಮಳೆ ಇಲ್ಲದೆ ಬೆಳೆಗಳು ಒಣಗಿಹೋಗುತ್ತಿದ್ದು, ಸರ್ಕಾರ ಮೋಡ ಬಿತ್ತನೆಗೆ ಮುಂದಾಗಬೇಕು ಎಂಬ ಆಗ್ರಹ ಕೇಳಿಬಂದಿದೆ.
ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಮೋಡ ಬಿತ್ತನೆಗೆ ಆಗ್ರಹ
ನಗರದಲ್ಲಿ ಮಾತನಾಡಿದ ಅವರು, ಹೈದರಾಬಾದ್ ಕರ್ನಾಟಕ ಭಾಗದಲ್ಲಿ ತೀವ್ರ ಬರ ತಾಂಡವವಾಡುತ್ತಿದೆ. ಸರ್ಕಾರ ಕೂಡಲೇ ಎಚ್ಚೆತ್ತು ಮೋಡ ಬಿತ್ತನೆ ಮಾಡಿ ಒಣಗುತ್ತಿರುವ ಬೆಳೆಗಳನ್ನು ರಕ್ಷಿಸಬೇಕು ಎಂದರು.
ಅಲ್ಲದೆ ಮಹಾರಾಷ್ಟ್ರದ ಮಳೆಯಿಂದ ಕೃಷ್ಣಾ ಹಾಗೂ ಭೀಮಾ ನದಿಗಳಲ್ಲಿ ಪ್ರವಾಹವುಂಟಾಗಿ ಆಸ್ತಿಪಾಸ್ತಿ ಹಾನಿಯಾಗಿದೆ. ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಬಳಲುತ್ತಿರುವ ಜನರ ರಕ್ಷಣೆಗೆ ಸರ್ಕಾರ ಮುಂದಾಗಬೇಕು. ನೆರೆ ಮತ್ತು ಬರ ಹಾನಿಯ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ಬಿಡುಗಡೆಗೊಳಿಸುವಂತೆ ಒತ್ತಾಯಿಸಿದರು.