ಕರ್ನಾಟಕ

karnataka

ETV Bharat / state

ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹ - ಶಾಶ್ವತ ಪರಿಹಾರ

ಪಟ್ಟಣದಲ್ಲಿ ನೀರಿನ ಸಮಸ್ಯೆ ತೆಲೆದೋರಿದ್ದು, ಮಹಿಳೆಯರು‌, ಮಕ್ಕಳು ನೀರಿಗಾಗಿ ಸರದಿ ಸಾಲಿನಲ್ಲಿ ನಿಂತು ನೀರು ಹಿಡಿಯುವಲ್ಲಿ ಬೇಸತ್ತಿದ್ದಾರೆ. ಆದರಿಂದ ಪುರಸಭೆ ಅಧಿಕಾರಿಗಳು ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿದರು.

ಪುರಸಭೆ ಕಚೇರಿಯ ಎದುರು ಮಹಿಳೆಯರು ಖಾಲಿ ಕೊಡಗಳನ್ನು ಹಿಡಿದು ಪುರಸಭೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು

By

Published : Mar 15, 2019, 5:36 PM IST

ಕಲಬುರಗಿ: ಕುಡಿಯುವ ನೀರಿನ ಶಾಶ್ವತ ಪರಿಹಾರಕ್ಕಾಗಿ ಆಗ್ರಹಿಸಿ ಜಿಲ್ಲೆಯ ವಾಡಿ‌ ಪಟ್ಟಣದಲ್ಲಿ ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್​ ಇಂಡಿಯಾ, ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ವಾಡಿ ವಲಯ ಅಧ್ಯಕ್ಷ ಶರಣು ಹೆರೋರ್ ನೇತೃತ್ವದಲ್ಲಿ ಪುರಸಭೆ ಕಚೇರಿಯ ಎದುರು ಮಹಿಳೆಯರು ಖಾಲಿ ಕೊಡಗಳನ್ನು ಹಿಡಿದು ಪುರಸಭೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ SUCI ಕಮ್ಯುನಿಸ್ಟ್ ಪಕ್ಷದ ಸ್ಥಳೀಯ ಸಮಿತಿಯ ಸದಸ್ಯ ಶರಣು ಹೇರೂರ್ ಮಾತನಾಡಿ, ಕಳೆದ ಕೆಲ ದಿನಗಳಿಂದ ವಾಡಿ‌ ಪಟ್ಟಣದಲ್ಲಿ ನೀರಿನ ಸಮಸ್ಯೆ ತೆಲೆದೋರಿದ್ದು, ಮಹಿಳೆಯರು‌, ಮಕ್ಕಳು ನೀರಿಗಾಗಿ ಸರದಿ ಸಾಲಿನಲ್ಲಿ ನಿಂತು ನೀರು ಹಿಡಿಯುವಲ್ಲಿ ಬೇಸತ್ತಿದ್ದಾರೆ. ಆದರಿಂದ ಪುರಸಭೆ ಅಧಿಕಾರಿಗಳು ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿದರು.

ABOUT THE AUTHOR

...view details