ಕರ್ನಾಟಕ

karnataka

SC-ST ಪಂಗಡದವರಿಗೆ​ ನ್ಯಾ.ನಾಗಮೋಹನದಾಸ್ ವರದಿ ಅನ್ವಯ ಮೀಸಲಾತಿಗೆ ಆಗ್ರಹ

By

Published : Dec 8, 2019, 5:47 PM IST

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದವರಿಗೆ ನ್ಯಾ.ನಾಗಮೋಹನದಾಸ್ ವರದಿ ಅನ್ವಯ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುವಂತೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಗುರುಶಾಂತ್ ಪಟ್ಟೆದಾರ ಆಗ್ರಹಿಸಿದ್ದಾರೆ.

Gurshant Pattedar
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಗುರುಶಾಂತ್ ಪಟ್ಟೆದಾರ

ಕಲಬುರಗಿ: ನ್ಯಾಯಮೂರ್ತಿ ನಾಗಮೋಹನದಾಸ್ ವರದಿ ಅನ್ವಯ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುವಂತೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಗುರುಶಾಂತ್ ಪಟ್ಟೆದಾರ ಆಗ್ರಹಿಸಿದ್ದಾರೆ.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಗುರುಶಾಂತ್ ಪಟ್ಟೆದಾರ

ಕಲಬುರ್ಗಿಯಲ್ಲಿ ಮಾತಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದವರಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು. ಪರಿಶಿಷ್ಟ ಜಾತಿಗೆ 25% ರಷ್ಟು ಹಾಗೂ ಪರಿಶಿಷ್ಟ ಪಂಗಡದವರಿಗೆ 7% ರಷ್ಟು ಮೀಸಲಾತಿಯನ್ನು ಹೆಚ್ಚಿಸುವಂತೆ ನ್ಯಾ.ನಾಗಮೋಹನದಾಸ್ ಅವರು ಸರ್ಕಾರಕ್ಕೆ ವರದಿ ನೀಡಿದ್ದಾರೆ. ಅದರ ಅನ್ವಯ ಮೀಸಲಾತಿ ಹೆಚ್ಚಿಸುವಂತೆ ಒತ್ತಾಯಿಸಿದರು.

ಡಿ.10 ರಂದು ನಾಗಮೋಹನದಾಸ್ ಅವರು ಕಲಬುರಗಿ ನಗರಕ್ಕೆ ಆಗಮಿಸುತ್ತಿದ್ದು, ಪರಿಶಿಷ್ಟ ಪಂಗಡ ಪರಿಶಿಷ್ಟ ಜಾತಿ ಜನಾಂಗದವರೊಂದಿಗೆ ಸಂವಾದ ನಡೆಸಲ್ಲಿದ್ದಾರೆ ಎಂದು ತಿಳಿಸಿದರು.

ABOUT THE AUTHOR

...view details