ಕಲಬುರಗಿ: ಅಕ್ರಮ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಕ್ರಿಮಿನಲ್‍ಗಳ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ನೂತನ ಪೊಲೀಸ್ ಕಮಿಷನರ್ ಎಂ.ಎನ್.ನಾಗರಾಜ್ ಎಚ್ಚರಿಕೆ ನೀಡಿದರು.
ಗೂಂಡಾಗಿರಿ ಮಾಡುವವರನ್ನು ಗಡಿಪಾರು ಮಾಡಲಾಗುವುದು: ಪೊಲೀಸ್ ಕಮಿಷನರ್ - ಕಲಬುರಗಿ
ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮದವರೊಂದಿದೆ ಮಾತನಾಡಿದ ಅವರು, ಗೂಂಡಾಗಿರಿಯಲ್ಲಿ ತೊಡಗಿಸಿಕೊಂಡವರಿಗೆ ಗಡಿಪಾರು ಮತ್ತು ಗೂಂಡಾ ಕಾಯ್ದೆಯಡಿ ಜೈಲಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ಪೊಲೀಸ್ ಕಮಿಷನರ್
ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮದವರೊಂದಿದೆ ಮಾತನಾಡಿದ ಅವರು, ಗೂಂಡಾಗಿರಿಯಲ್ಲಿ ತೊಡಗಿಸಿಕೊಂಡವರಿಗೆ ಗಡಿಪಾರು ಮತ್ತು ಗೂಂಡಾ ಕಾಯ್ದೆಯಡಿ ಜೈಲಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕೋದೇ ನನ್ನ ಮೊದಲ ಆದ್ಯತೆ ಎಂದ ಅವರು, ನಾನು ಅಧಿಕಾರ ವಹಿಸಿಕೊಂಡ ನಂತರ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದೇನೆ. ಹಲವು ಮಾಹಿತಿಗಳನ್ನು ಪಡೆದುಕೊಂಡಿದ್ದೇನೆ. ಕಾನೂನು ಸುವ್ಯವಸ್ಥೆ, ಅಪರಾಧ ತಡೆಗಟ್ಟುವ ಸಲುವಾಗಿ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎನ್ನೋದರ ಕುರಿತು ಚರ್ಚಿಸಿದ್ದೇನೆ ಎಂದರು.