ಕಲಬುರಗಿ:ಬೆಂಬಲ ಬೆಲೆ ಯೋಜನೆಯಡಿ 2018-19ನೇ ಸಾಲಿನಲ್ಲಿ ಎಫ್ಎಕ್ಯೂ ಗುಣಮಟ್ಟದ ತೊಗರಿ ಕಾಳನ್ನು ಸರ್ಕಾರಕ್ಕೆ ಮಾರಾಟ ಮಾಡಿಯೂ, ಇದುವರೆಗೆ ಹಣ ಜಮೆ ಆಗದೇ ಇರುವ ರೈತರು ತಮ್ಮ ಅಗತ್ಯ ದಾಖಲೆಗಳನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಿ, ಅದರ ಪ್ರತಿಯನ್ನ ಖರೀದಿ ಕೇಂದ್ರದ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಡಿಸಿ ವೆಂಕಟೇಶ್ ಕುಮಾರ್ ತಿಳಿಸಿದ್ದಾರೆ.
ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವಂತೆ ರೈತರಿಗೆ ಡಿಸಿ ಸೂಚನೆ - Kalburgi
ಬೆಂಬಲ ಬೆಲೆ ಯೋಜನೆಯಡಿ 2018-19ನೇ ಸಾಲಿನಲ್ಲಿ ಎಫ್ಎಕ್ಯೂ ಗುಣಮಟ್ಟದ ತೊಗರಿ ಕಾಳನ್ನು ಸರ್ಕಾರಕ್ಕೆ ಮಾರಾಟ ಮಾಡಿಯೂ, ಇದುವರೆಗೂ ಹಣ ಜಮೆ ಆಗದೇ ಇರುವ ರೈತರು ತಮ್ಮ ಅಗತ್ಯ ದಾಖಲೆಗಳನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಿ, ಅದರ ಪ್ರತಿಯನ್ನ ಖರೀದಿ ಕೇಂದ್ರದ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಡಿಸಿ ವೆಂಕಟೇಶ್ ಕುಮಾರ್ ತಿಳಿಸಿದ್ದಾರೆ.
ಇದಲ್ಲದೇ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ಮತ್ತು ತೊಗರಿ ಅಭಿವೃದ್ಧಿ ಮಂಡಳಿ ಕಾರ್ಯಾಲಯಕ್ಕೂ, ಅಗತ್ಯ ದಾಖಲೆಗಳನ್ನು ಸಲ್ಲಿಸಬಹುದು. ರೈತರಿಗೆ ತೊಗರಿ ಮಾರಾಟದ ಹಣವನ್ನು ಆಧಾರ್ ಸಂಖ್ಯೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಮಾತ್ರ ಪಾವತಿಸಲಾಗುತ್ತಿದೆ. ಜಿಲ್ಲೆಯ ಕೆಲವು ರೈತರ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗದ ಕಾರಣ ಹಣ ಜಮೆ ಆಗಿರುವುದಿಲ್ಲ.
ಆದ್ದರಿಂದ ಹಣ ಜಮೆ ಆಗಿರದ ರೈತರು ಕೂಡಲೆ ತಮ್ಮ ಬ್ಯಾಂಕ್ ಖಾತೆಯ ಪಾಸ್ ಬುಕ್ ಪ್ರತಿ, ಖರೀದಿ ಕೇಂದ್ರದ ತೊಗರಿ ಖರೀದಿ ಬಿಲ್ಲು, ಆಧಾರ್ ಪ್ರತಿ ದಾಖಲೆಗಳನ್ನು ಬ್ಯಾಂಕ್ ಖಾತೆಗೆ ಜೋಡಣೆ ಮಾಡಲು ಖರೀದಿ ಕೇಂದ್ರದ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸುವಂತೆ ಸೂಚಿಸಿದರು.
TAGGED:
Kalburgi