ಕರ್ನಾಟಕ

karnataka

ETV Bharat / state

ಪ್ರವಾಹ ಸಂತ್ರಸ್ತರ ಕುರಿತು ಕೇಂದ್ರ ,ರಾಜ್ಯ ಸರ್ಕಾರಗಳಿಂದ ನಿರ್ಲಕ್ಷ್ಯ ಧೋರಣೆ ; ಕಾಂಗ್ರೆಸ್ ಧರಣಿ - ಜಗತ್ ವೃತ್ತ

ರಾಜ್ಯದಲ್ಲಿ ಲಕ್ಷಾಂತರ ಜನ ಪ್ರವಾಹಕ್ಕೆ ತುತ್ತಾಗಿ ಸಂಕಷ್ಟ ಎದುರಿಸುತ್ತಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ಧೋರಣೆ ತಳೆದಿವೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಲಬುರಗಿಯಲ್ಲಿ ಧರಣಿ ನಡೆಸಲಾಯಿತು.

ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಧರಣಿ

By

Published : Sep 13, 2019, 5:39 AM IST

ಕಲಬುರಗಿ: ರಾಜ್ಯದಲ್ಲಿ ಲಕ್ಷಾಂತರ ಜನ ಪ್ರವಾಹಕ್ಕೆ ತುತ್ತಾಗಿ ಸಂಕಷ್ಟ ಎದುರಿಸುತ್ತಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ಧೋರಣೆ ತಳೆದಿವೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಧರಣಿ ನಡೆಸಲಾಯಿತು.

ನಗರದ ಜಗತ್ ವೃತ್ತದ ಅಂಬೇಡ್ಕರ್ ಪ್ರತಿಮೆ ಬಳಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ನೇತೃತ್ವದಲ್ಲಿ ಧರಣಿ ನಡೆಸಲಾಯಿತು.ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು,ನೆರೆ ಸಂತ್ರಸ್ಥರ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಧರಣಿ

ಕೂಡಲೇ ಅಗತ್ಯ ನೆರವು ನೀಡೋ ಮೂಲಕ ನೆರೆ ಸಂತ್ರಸ್ಥರಿಗೆ ಸ್ಪಂದಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ಮಾಡೋದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.

ABOUT THE AUTHOR

...view details