ಕರ್ನಾಟಕ

karnataka

ETV Bharat / state

DHO ಆತ್ಮಹತ್ಯೆ ಪ್ರಕರಣ: ವೈದ್ಯರಿಗೆ ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ - doctors protest news

ನಂಜನಗೂಡಿನಲ್ಲಿ ನಡೆದ ತಾಲೂಕು ವೈದ್ಯಾಧಿಕಾರಿ ಆತ್ಮಹತ್ಯೆ ಪ್ರಕರಣ ಖಂಡಿಸಿ ಕಲಬುರಗಿಯಲ್ಲಿ ವೈದ್ಯರು ಪ್ರತಿಭಟನೆ ನಡೆದಿಸಿದ್ದು, ವೈದ್ಯರು ಹಾಗೂ ವೈದ್ಯಾಧಿಕಾರಿಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿದ್ದಾರೆ.

-kalburgi
ವೈದ್ಯರ ಪ್ರತಿಭಟನೆ

By

Published : Aug 21, 2020, 10:19 PM IST

ಕಲಬುರಗಿ: ಮೇಲಾಧಿಕಾರಿಗಳ ಕಿರುಕುಳದಿಂದ ನಂಜನಗೂಡು ಟಿ.ಎಚ್.ಒ. ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ, ಆತ್ಮಹತ್ಯೆ ಪ್ರಕರಣವನ್ನು ಖಂಡಿಸಿ ಕಲಬುರಗಿಯಲ್ಲಿ ವೈದ್ಯರಿಂದ ಪ್ರತಿಭಟನೆ ನಡೆಯಿತು.

ವೈದ್ಯರ ಪ್ರತಿಭಟನೆ
ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ನೇತೃತ್ವದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಕೊರೊನಾ ಸಂದರ್ಭದಲ್ಲಿ ವೈದ್ಯರು, ವೈದ್ಯಾಧಿಕಾರಿಗಳ ಮೇಲೆ ಕೆಲಸದ ಒತ್ತಡ ಹೆಚ್ಚಾಗಿದೆ. ಅದರ ಜೊತೆಗೆ ಹಿರಿಯ ಅಧಿಕಾರಿಗಳಿಂದ ಹೆಚ್ಚಿದ ಕಿರುಕುಳದ ಪರಿಣಾಮವಾಗಿ ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದುವ ಆರೋಪಿಸಿದ್ರು.

ಕೂಡಲೇ ಆತ್ಮಹತ್ಯೆಯ ಸಮಗ್ರ ತನಿಖೆ ನಡೆಸಬೇಕು. ಘಟನೆಗೆ ಕಾರಣರಾದ ಹಿರಿಯ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ರು. ಇದೇ ವೇಳೆ ವೈದ್ಯರಿಗೆ, ವೈದ್ಯಾಧಿಕಾರಿಗಳಿಗೆ ಸೂಕ್ತ ರಕ್ಷಣೆ ನೀಡಲು ಆಗ್ರಹಿಸಿ ಜಿಲ್ಲಾ ಆರೋಗ್ಯಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ABOUT THE AUTHOR

...view details