ಸೇಡಂ: ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ ದಿಢೀರ್ ಭೇಟಿ ನೀಡಿ ಪರಿಶೀಲಿಸಿ ಕೋವಿಡ್ ಸೋಂಕಿತರ ಆರೋಗ್ಯ ವಿಚಾರಿಸಿದ್ದಾರೆ.
ಸೇಡಂ ಸರ್ಕಾರಿ ಆಸ್ಪತ್ರೆಗೆ ಡಾ. ಶರಣಪ್ರಕಾಶ ಪಾಟೀಲ ಭೇಟಿ, ಪರಿಶೀಲನೆ - ಸೇಡಂ ಸರ್ಕಾರಿ ಆಸ್ಪತ್ರೆ
ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಸೇಡಂ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ಕೋವಿಡ್ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ.
ಆಸ್ಪತ್ರೆಯ ರೋಗಿಗಳಿಗೆ ಯಾವುದೇ ರೀತಿಯ ಲೋಪವಾಗದಂತೆ ಎಚ್ಚರ ವಹಿಸಬೇಕು. ತುರ್ತು ಸಂದರ್ಭಗಳಲ್ಲಿ ಕೂಡಲೇ ಸ್ಪಂದಿಸಬೇಕು. ಸರಿಯಾದ ಸಮಯಕ್ಕೆ ಊಟ, ಮಾತ್ರೆಗಳು ದೊರೆಯುವಂತಾಗಬೇಕು. ಯಾವುದೇ ರೀತಿಯ ಸಹಾಯದ ಅವಶ್ಯಕತೆ ಇದ್ದಲ್ಲಿ ತಮ್ಮನ್ನು ಸಂಪರ್ಕಿಸಿ ಎಂದರು.
ಆಸ್ಪತ್ರೆಯಲ್ಲಿನ ವ್ಯವಸ್ಥೆಗಳ ಮಾಹಿತಿ ನೀಡಿದ ಡಾ. ಗೀತಾ ಪಾಟೀಲ, ಈಗಾಗಲೇ 10 ಆಕ್ಸಿಜನ್ ಕಾನ್ಸಂಟ್ರೇಟರ್ ಮತ್ತು 20 ಸಿಲಿಂಡರ್ಗಳ ಬೇಡಿಕೆ ಸಲ್ಲಿಸಲಾಗಿದೆ. ಸದ್ಯಕ್ಕೆ ಇರುವ 3 ಕಾನ್ಸಂಟ್ರೇಟರ್ ಎಮರ್ಜೆನ್ಸಿ ಸಮಯಕ್ಕೆ ಬಳಕೆ ಮಾಡಲಾಗುತ್ತಿದೆ. ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ತಿಳಿಸಿದರು.