ಕಲಬುರಗಿ: ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ನಿರ್ದೇಶನದಂತೆ ಜಿಲ್ಲೆಯ 8 ಆರೋಗ್ಯ ಕೇಂದ್ರಗಳಲ್ಲಿ ಮೊದಲ ಹಂತದ ಕೊರೊನಾ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ತಿಳಿಸಿದ್ದಾರೆ.
8 ಆರೋಗ್ಯ ಕೇಂದ್ರಗಳಲ್ಲಿ ಮೊದಲ ಹಂತದ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ - ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ
ಗುಲಬರ್ಗಾ ವೈದ್ಯಕೀಯ ಮಹಾವಿದ್ಯಾಲಯ, ಅಫಜಲಪೂರ, ಆಳಂದ, ಚಿಂಚೋಳಿ, ಚಿತ್ತಾಪೂರ, ಜೇವರ್ಗಿ, ಸೇಡಂ ತಾಲೂಕಾಸ್ಪತ್ರೆಗಳು ಹಾಗೂ ಅಫಜಲಪೂರ ತಾಲೂಕಿನ ಗೊಬ್ಬುರ (ಬಿ) ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೆಳಿಗ್ಗೆ 11 ರಿಂದ ಸಾಯಂಕಾಲ 5 ಗಂಟೆಯವರೆಗೆ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಮಾಹಿತಿ ನೀಡಿದರು.
![8 ಆರೋಗ್ಯ ಕೇಂದ್ರಗಳಲ್ಲಿ ಮೊದಲ ಹಂತದ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ Drive to a first-line vaccine program at 8 health centers in kalburgi](https://etvbharatimages.akamaized.net/etvbharat/prod-images/768-512-10257738-thumbnail-3x2-nin.jpg)
ಗುಲಬರ್ಗಾ ವೈದ್ಯಕೀಯ ಮಹಾವಿದ್ಯಾಲಯ, ಅಫಜಲಪೂರ, ಆಳಂದ, ಚಿಂಚೋಳಿ, ಚಿತ್ತಾಪೂರ, ಜೇವರ್ಗಿ, ಸೇಡಂ ತಾಲೂಕಾಸ್ಪತ್ರೆಗಳು ಹಾಗೂ ಅಫಜಲಪೂರ ತಾಲೂಕಿನ ಗೊಬ್ಬುರ (ಬಿ) ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೆಳಿಗ್ಗೆ 11 ರಿಂದ ಸಾಯಂಕಾಲ 5 ಗಂಟೆಯವರೆಗೆ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಪ್ರತಿ ಲಸಿಕಾ ಕೇಂದ್ರಗಳಲ್ಲಿ ಕನಿಷ್ಠ 100 ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲಾಗುವುದು. ಲಸಿಕೆ ವಿತರಣೆ ನಿರ್ವಹಣೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದೆ. ಕೋವಿಡ್-19 ಲಸಿಕೆ ನೀಡುವುದರಿಂದ ಯಾವುದೇ ಅಡ್ಡ ಪರಿಣಾಮ ಸಂಭವಿಸಿದಲ್ಲಿ, ಇದರ ನಿರ್ವಹಣೆಗಾಗಿ ಪ್ರತಿ ಲಸಿಕಾ ವಿತರಣಾ ಕೇಂದ್ರದಲ್ಲಿ ತಜ್ಞ ವೈದ್ಯರನ್ನೊಳಗೊಂಡ (AEFI) ನಿರ್ವಹಣಾ ಘಟಕಗಳು ರಚಿಸಲಾಗಿದೆ. ಪ್ರಧಾನ ಮಂತ್ರಿಯವರು ಚಾಲನೆ ನೀಡಿದ ನಂತರ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಲಸಿಕಾ ನೀಡುವ ಕಾರ್ಯಕ್ರಮ ಜರುಗಲಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.