ಕಲಬುರಗಿ:ಅಯೋಧ್ಯೆಯಲ್ಲಿ ಬುದ್ಧನ ಅವಶೇಷಗಳು ಪತ್ತೆಯಾದ ಹಿನ್ನೆಲೆ ರಾಮಮಂದಿರ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸುವಂತೆ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸದಂತೆ ಡಿಎಸ್ಎಸ್ ಆಗ್ರಹ - ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಡಿಎಸ್ಎಸ್ ವಿರೋಧ
ಅಯೋಧ್ಯೆಯಲ್ಲಿ ಬುದ್ದನ ಅವಶೇಷಗಳು ಪತ್ತೆಯಾದ ಹಿನ್ನೆಲೆ, ಆ ಪ್ರದೇಶವನ್ನು ಐತಿಹಾಸಿಕ ಸ್ಮಾರಕ ಎಂದು ಘೋಷಿಸಬೇಕು. ಅಲ್ಲಿ ರಾಮ ಮಂದಿರ ನಿರ್ಮಿಸಬಾರದು ಎಂದು ಡಿಎಸ್ಎಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ.
![ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸದಂತೆ ಡಿಎಸ್ಎಸ್ ಆಗ್ರಹ DSS oppose construction of Ram Mandir in Ayodhya](https://etvbharatimages.akamaized.net/etvbharat/prod-images/768-512-7526929-28-7526929-1591606839149.jpg)
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಡಿಎಸ್ಎಸ್ ವಿರೋಧ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಿರೋಧಿಸಿ ಪ್ರತಿಭಟನೆ
ಡಿಎಸ್ಎಸ್ ಸಂಚಾಲಕ ಶ್ರವಣಕುಮಾರ ಮೋಸಲಗಿ ನೇತೃತ್ವದಲ್ಲಿ ಜಿಲ್ಲೆಯ ವಾಡಿ ಪಟ್ಟಣದ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಅಯೋಧ್ಯೆ ಪ್ರದೇಶವನ್ನು ಪುರಾತತ್ವ ಇಲಾಖೆಗೆ ಒಪ್ಪಿಸಿ ಐತಿಹಾಸಿಕ ಸ್ಮಾರಕವೆಂದು ಘೋಷಿಸಿ ಅಭಿವೃದ್ಧಿಗೊಳಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು.