ಕಲಬುರಗಿ:ಲಾಕ್‌ಡೌನ್ ಕರ್ತವ್ಯ ನಿರ್ಲಕ್ಷ್ಯ ಮತ್ತು ಅಧಿಕಾರ ದುರ್ಬಳಕೆ ಆರೋಪ ಮೇಲೆ ಇಬ್ಬರು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಶರತ್ ಬಿ ಆದೇಶ ಹೊರಡಿಸಿದ್ದಾರೆ.
ಕರ್ತವ್ಯ ನಿರ್ಲಕ್ಷ್ಯ: ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಅಮಾನತು
ಅಧಿಕಾರ ದುರ್ಬಳಕೆ ಆರೋಪದ ಮೇಲೆ ಇಬ್ಬರು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಶರತ್ ಬಿ ಆದೇಶ ಹೊರಡಿಸಿದ್ದಾರೆ.
ಸಣ್ಣ ನೀರಾವರಿ ಇಲಾಖೆಯ ನರೇಂದ್ರಕುಮಾರ್ ಮತ್ತು ಮಲ್ಲಿಕಾರ್ಜುನ ಮಾಲಿಪಾಟೀಲ್ ಅಮಾನತಾದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು. ಕಲಬುರಗಿ ತಾಲೂಕಿನ ಪಟ್ಟಣ ಹೋಬಳಿಯ ಸೆಕ್ಟರಲ್ ಮ್ಯಾಜಿಸ್ಟ್ರೇಟ್ ಆಗಿ ನರೇಂದ್ರ ಕುಮಾರ್ ಅವರನ್ನು ನೇಮಕ ಮಾಡಲಾಗಿತ್ತು, ಆದರೆ ಕರ್ತವ್ಯಕ್ಕೆ ಹಾಜರಾಗದೇ ನರೇಂದ್ರಕುಮಾರ್ ನಿರ್ಲಕ್ಷ್ಯ ವಹಿಸಿದ್ದಾರೆ.
ಅವರ ಬದಲಿಗೆ ಎಇ ಮಲ್ಲಿಕಾರ್ಜುನ ಮಾಲಿಪಾಟೀಲ್ ಸೆಕ್ಟರಲ್ ಮ್ಯಾಜಿಸ್ಟ್ರೇಟ್ ಆಗಿ ಕಾರ್ಯನಿರ್ವಹಣೆ ಮಾಡಿದ್ದಾರೆ. ಯಾವುದೇ ಆದೇಶ ಇಲ್ಲದೆಯೇ ಕರ್ತವ್ಯ ನಿರ್ವಹಿಸಿ ಅಧಿಕಾರ ದುರ್ಬಳಕೆ ಮಾಡಿರುವ ಹಿನ್ನೆಲೆ ಇಬ್ಬರೂ ಕಾರ್ಯಪಾಲಕ ಎಂಜಿನಿಯರ್ಗಳ ಅಮಾನತುಗೊಳಿಸಿ ಡಿಸಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.