ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಹಾಗೂ ಹೊಸಳ್ಳಿ ಹೆಚ್. ಗ್ರಾಮದಲ್ಲಿ ಮತ್ತೆ ಭೂಮಿಯಿಂದ ಬಾರಿ ಸದ್ದೊಂದು ಕೇಳಿ ಬಂದಿದೆ. ಪರಿಣಾಮ ಅಲ್ಲಿನ ಜನ ಮತ್ತೆ ಆತಂಕಕ್ಕೆ ಸಿಲುಕಿದ್ದಾರೆ. ಜಿಲ್ಲೆಯ ಚಿಂಚೋಳಿ ತಾಲೂಕಿನ ಗ್ರಾಮಗಳಲ್ಲಿ ಮುಂಜಾನೆ 9.50ರ ಸಮಯದಲ್ಲಿ ಬಂದ ಬಾರಿ ಸದ್ದಿಗೆ ಜನ ಬೆಚ್ಚಿಬಿದ್ದಿದ್ದಾರೆ. ಈಗಾಗಲೇ ಲಘು ಭೂಕಂಪನದಿಂದ ಜನ ಕಂಗಾಲಾಗಿದ್ದರು.
ಕಳೆದ ಕೆಲ ತಿಂಗಳಿಂದ ನಿರಂತರವಾಗಿ ಲಘು ಭೂಕಂಪನ ಉಂಟಾಗುತ್ತಿದೆ. ಗ್ರಾಮಕ್ಕೆ ಭೂ ವಿಜ್ಞಾನಿಗಳು ಭೇಟಿ ನೀಡಿ ಸೀಸ್ಮೋಮೀಟರ್ ಅಳವಡಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ವಾರದ ಹಿಂದೆ ಕಂದಾಯ ಸಚಿವ ಆರ್. ಅಶೋಕ್ ಕೂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ವೆಗೆ ಆದೇಶಿಸಿದ್ದರು.