ಕಲಬುರಗಿ:ಎಂ.ಎಸ್.ಸ್ವಾಮಿನಾಥನ್ ವರದಿ ಜಾರಿ ಸೇರಿದಂತೆ ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಸ್ವಾಮಿನಾಥನ್ ವರದಿ ಜಾರಿಗೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ - Enforce MS Swaminathan Report
ಎಂ.ಎಸ್.ಸ್ವಾಮಿನಾಥನ್ ವರದಿ ಜಾರಿ ಸೇರಿದಂತೆ ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು
ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಶರಣ ಬಸಪ್ಪ ಮಮ್ಮಶೆಟ್ಟಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಿಂದ ಜಿಲ್ಲಾ ಪಂಚಾಯತ್ವರೆಗೆ ಪ್ರತಿಭಟನಾ ಮೆರಣಿಗೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಎಂ. ಎಸ್.ಸ್ವಾಮಿನಾಥನ್ ವರದಿ ಜಾರಿಗೊಳಿಸುವುದು ಸೇರಿದಂತೆ ರೈತರ ಕೃಷಿ ಸಾಲ ಸಂಪೂರ್ಣ ಸಾಲಮನ್ನಾ ಮಾಡಬೇಕು. ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡಿದ ಕೂಲಿಕಾರರ ಬಾಕಿ ವೇತನ ಪಾವತಿಸುವಂತೆ ಒತ್ತಾಯಿಸಿದರು.