ಕರ್ನಾಟಕ

karnataka

ರಾಜ್ಯದಲ್ಲಿ ಎರಡನೇ ದರ್ಜೆ ನಾಗರಿಕರಾದ ಕಲ್ಯಾಣ ಕರ್ನಾಟಕ ಜನ: ಈಶ್ವರ ಖಂಡ್ರೆ

By

Published : Aug 6, 2021, 3:38 PM IST

ಕಲಬುರ್ಗಿ, ಯಾದಗಿರಿ, ರಾಯಚೂರು ಮತ್ತು ಬಳ್ಳಾರಿಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಈ ಭಾಗದ ಜನರ ಮೇಲೆ ಇಷ್ಟೇಕೆ ಮಲತಾಯಿ ಧೋರಣೆ ಬಿಜೆಪಿ ಸರ್ಕಾರ ತೋರುತ್ತಿದೆ ಗೊತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

eshwar-khandre
ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ

ಕಲಬುರ್ಗಿ: ರಾಜ್ಯದಲ್ಲಿ ಕಲ್ಯಾಣ ಕರ್ನಾಟಕದ ಜನ ಎರಡನೇ ದರ್ಜೆಯ ನಾಗರಿಕರಾಗಿ ಬದುಕುವಂತಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕಿಡಿಕಾರಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದವರಾದ ಬಸವರಾಜ ಬೊಮ್ಮಾಯಿ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇಲ್ಲಿನ ಜನ ಇಟ್ಟಿದ್ದರು. ಆದರೆ, ಸಚಿವ ಸಂಪುಟದಲ್ಲಿ ಕಲ್ಯಾಣ ಕರ್ನಾಟಕದವರನ್ನು ಮತ್ತೆ ಕಡೆಗಣಿಸಲಾಗಿದೆ ಎಂದರು.

ಕಲಬುರ್ಗಿ, ಯಾದಗಿರಿ, ರಾಯಚೂರು ಮತ್ತು ಬಳ್ಳಾರಿಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಈ ಭಾಗದ ಜನರ ಮೇಲೆ ಇಷ್ಟೇಕೆ ಮಲತಾಯಿ ಧೋರಣೆ ಬಿಜೆಪಿ ಸರ್ಕಾರ ತೋರುತ್ತಿದೆ ಗೊತ್ತಿಲ್ಲ. ಸರ್ಕಾರದ ನಡೆ ನೋಡಿದರೆ ಈ ಭಾಗದ ರಾಜ್ಯದಲ್ಲಿ 2ನೇ ದರ್ಜೆ ನಾಗರಿಕರಾಗಿ ಜೀವನ ನಡೆಸುವ ಸ್ಥಿತಿ ನಿರ್ಮಾಣವಾಗಿದೆ ಎಂದು ಸಂಪುಟದಲ್ಲಿ ಕಲ್ಯಾಣ ಕರ್ನಾಟಕ ಭಾಗವನ್ನು ಕಡೆಗಣಿಸಿದ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ‌.

ಓದಿ:ಸಿಬಿಎಸ್​ಸಿ ಫಲಿತಾಂಶದಲ್ಲಿ ಖಾಸಗಿ ಶಾಲೆಗಳ ಕುತಂತ್ರ.. ಸಿಡಿದೆದ್ದ ಪೋಷಕರು..

ABOUT THE AUTHOR

...view details