ಕರ್ನಾಟಕ

karnataka

ETV Bharat / state

ಹೈಕಮಾಂಡ್​ ನೀಡುವ ಯಾವುದೇ ಜವಾಬ್ದಾರಿ ನಿಭಾಯಿಸುವೆ.. ಈಶ್ವರ ಖಂಡ್ರೆ - eshwar khandre press meet in kalburgi

ಕೆಪಿಸಿಸಿ ಅಧ್ಯಕ್ಷರಾಗಲು ಪಕ್ಷದ ಹಲವರು ಯೋಗ್ಯರು ಹಾಗೂ ಆಕಾಂಕ್ಷಿಗಳಿದ್ದಾರೆ. ನಾನು ಸದ್ಯ ಕೆಪಿಸಿಸಿ ಕಾರ್ಯಾಧ್ಯಕ್ಷನಾಗಿ ಅತ್ಯಂತ ಪರಿಶ್ರಮದಿಂದ ಕಾರ್ಯನಿರ್ವಹಿಸುತ್ತಿದ್ದೇನೆ. ಮುಂದೆಯೂ ವರಿಷ್ಠರು ಯಾವುದೇ ಹುದ್ದೆ ನೀಡಿದರೂ ಜವಾಬ್ದಾರಿಯುತವಾಗಿ ನಿಭಾಯಿಸುತ್ತೇನೆ ಎಂದು ಕಲಬುರಗಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

eshwar khandre press meet in kalburgi
ಹೈಕಮಾಂಡ್​ ನೀಡುವ ಜವಬ್ದಾರಿ ಅಚ್ಚುಕಟ್ಟಾಗಿ ನಿಭಾಯಿಸುವೆ: ಖಂಡ್ರೆ ಹೇಳಿಕೆ

By

Published : Jan 5, 2020, 8:30 PM IST

ಕಲಬುರಗಿ:ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ. ಹೈಕಮಾಂಡ್ ನೀಡುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರಾಗಲು ಪಕ್ಷದ ಹಲವರು ಯೋಗ್ಯರು ಹಾಗೂ ಆಕಾಂಕ್ಷಿಗಳಿದ್ದಾರೆ. ನಾನು ಸದ್ಯ ಕೆಪಿಸಿಸಿ ಕಾರ್ಯಾಧ್ಯಕ್ಷನಾಗಿ ಅತ್ಯಂತ ಪರಿಶ್ರಮದಿಂದ ಕಾರ್ಯನಿರ್ವಹಿಸುತ್ತಿದ್ದೇನೆ. ಮುಂದೆಯೂ ವರಿಷ್ಠರು ಯಾವುದೇ ಜವಾಬ್ದಾರಿ ನೀಡಿದರೂ ಜವಾಬ್ದಾರಿಯುತವಾಗಿ ನಿಭಾಯಿಸುತ್ತೇನೆ ಎಂದು ಹೇಳಿದರು.

ಈಶ್ವರ್‌ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ..

ಇದೇ ವೇಳೆ ಶಾಸಕ ಸೋಮಶೇಖರ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಹೇಳಿಕೆ ನೀಡಿದ್ದಾರೆ. ಅಲ್ಪಸಂಖ್ಯಾತರಲ್ಲಿ ಭಯ ಹುಟ್ಟಿಸಿದ್ದಾರೆ. ಹಾಗಾಗಿ ಸೋಮಶೇಖರ ರೆಡ್ಡಿ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ ಬಂಧಿಸಬೇಕು ಎಂದು ಕಿಡಿಕಾರಿದರು.

ಅಷ್ಟೇ ಅಲ್ಲ, ಬಿಜೆಪಿ ಸರ್ಕಾರ ದ್ವೇಷದ ರಾಜಕೀಯ ಮಾಡಲು ಹೊರಟಿದೆ. ಕಾಂಗ್ರೆಸ್ ಶಾಸಕರು ಗೆದ್ದ ಕ್ಷೇತ್ರಗಳ ಅನುದಾನ ಕಡಿತಗೊಳಿಸಿದೆ. ಕೂಡಲೇ ಈ ಹಿಂದೆ ಮಂಜೂರಾದ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.

ರಾಜ್ಯದ ಜನತೆಗೆ ಪ್ರಧಾನಿ ಅವಮಾನ: ಪವಿತ್ರ ಶ್ರೀಸಿದ್ಧಗಂಗಾ ಮಠದಲ್ಲಿ ಮಕ್ಕಳ ಮುಂದೆ ಪ್ರಧಾನಿ ಮೋದಿ ರಾಜಕೀಯ ಭಾಷಣ ಮಾಡಿರುವುದು ಸರಿಯಲ್ಲ. ರಾಜ್ಯದ ಜನರಿಗೆ ಪ್ರಧಾನಿ ಅವಮಾನ, ಮೋಸ ಮಾಡಿದ್ದಾರೆ. ಮುಖ್ಯಮಂತ್ರಿಗಳು ರಾಜ್ಯದ ಸಮಸ್ಯೆಗಳನ್ನು ಕುರಿತು ಚರ್ಚಿಸಲು ರಾಜಭವನಕ್ಕೆ ತೆರಳಿದಾಗ, ಭೇಟಿಗೆ ಅವಕಾಶ ನೀಡದೆ ಅವಮಾನ ಮಾಡಿದ್ದಾರೆ ಎಂದು ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದರು.

ABOUT THE AUTHOR

...view details