ಕರ್ನಾಟಕ

karnataka

By

Published : Sep 1, 2021, 1:31 PM IST

ETV Bharat / state

ಕಲಬುರಗಿಯಲ್ಲಿ ಕಾಂಗ್ರೆಸ್ 40 ಸೀಟ್​ ಗೆದ್ದು ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲಿದೆ: ಈಶ್ವರ್ ಖಂಡ್ರೆ

ಮಹಾನಗರ ಪಾಲಿಕೆ ಚುನಾವಣೆ ರಂಗೇರುತ್ತಿದೆ. ಈ ನಡುವೆ ಬಿಜೆಪಿ ಹಾಗೂ ಅವರ ಪ್ರಣಾಳಿಕೆ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್​ ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ. ಬಸವಕಲ್ಯಾಣದ ಅನುಭವ ಮಂಟಪ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದ್ದು ಕಾಂಗ್ರೆಸ್, ಆದರೆ ಬಿಜೆಪಿ ಸರ್ಕಾರ ತನ್ನ ಸಾಧನೆ ಅಂತಾ ಚುನಾವಣೆ ಪ್ರಣಾಳಿಕೆಯಲ್ಲಿ ಹಾಕಿಕೊಂಡಿದೆ ಎಂದು ಆರೋಪಿಸಿದ್ದಾರೆ.

eshwar-khandre
ಈಶ್ವರ್ ಖಂಡ್ರೆ

ಕಲಬುರಗಿ: ಜೆಡಿಎಸ್ ಸ್ವಾರ್ಥ ರಾಜಕಾರಣ ಮಾಡುತ್ತಿದೆ. ಇನ್ನು ಎಐಎಂಐಎಂ ಬಿಜೆಪಿ ಬಿ ಟೀಮ್ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಿ ಅಧಿಕಾರ ಸಿಗುತ್ತೋ ಆ ಕಡೆ ಜೆಡಿಎಸ್ ನವರು ಹೋಗುತ್ತಿದ್ದಾರೆ. ಎಐಎಂಐಎಂ ಬಿಜೆಪಿ ಬಿ ಟೀಮ್ ಆಗಿದೆ. ಬಿಜೆಪಿಯವರು ಜಿಡಿಪಿ ಹೆಚ್ಚಾಗಿದೆ ಅಂತಿದ್ದಾರೆ. ಜಿಡಿಪಿ ಅಂದ್ರೆ, ಗ್ಯಾಸ್, ಡೀಸೆಲ್, ಪೆಟ್ರೋಲ್ ಬೆಲೆ ಹೆಚ್ಚಳ ಆಗಿದೆ. ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಆಡಳಿತದಿಂದ ಜನ ರೋಸಿ ಹೋಗಿದ್ದಾರೆ ಎಂದರು.

ಕಾಂಗ್ರೆಸ್ 40 ಸೀಟ್​ ಗೆದ್ದು ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲಿದೆ: ಈಶ್ವರ್ ಖಂಡ್ರೆ
ನಕಲಿ ರಾಷ್ಟ್ರೀಯವಾದಿಗಳು

ಬಿಜೆಪಿಯವರು ಧರ್ಮಗಳನ್ನು ಒಡೆದು ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರು ಬ್ರಿಟಿಷರಂತೆ ಒಡೆದಾಳುವ ನೀತಿ ಅನುಸರಿಸುತ್ತಿದ್ದಾರೆ. ಅವರು ನಕಲಿ ರಾಷ್ಟ್ರೀಯವಾದಿಗಳು. ಅವರಿಂದ ಕಾಂಗ್ರೆಸ್ ಪಾಠ ಕಲಿಯುವ ಅವಶ್ಯಕತೆ ಇಲ್ಲ. ಈ ಬಾರಿ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟ ಆಗಲಿದೆ. ಕಲಬುರಗಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ 40 ಸೀಟ್ ಗೆದ್ದು ಸ್ವತಂತ್ರವಾಗಿ ಆಡಳಿತ ನಡೆಸಲಿದೆ ಎಂದಿದ್ದಾರೆ.

ಬಿಜೆಪಿಯ ಅವನತಿ ಕಲ್ಯಾಣ ಕರ್ನಾಟಕದಿಂದಲೇ

ಮಲ್ಲಿಕಾರ್ಜುನ ‌ಖರ್ಗೆ ಮತ್ತು ದಿ.ಎನ್. ಧರ್ಮಸಿಂಗ್ ಈ ಭಾಗಕ್ಕೆ ಅನೇಕ ಕೊಡುಗೆಗಳನ್ನ ನೀಡಿದ್ದಾರೆ. ಜಾತ್ಯಾತೀತತೆ ಬಗ್ಗೆ ಮಾತನಾಡುವ ಜೆಡಿಎಸ್ ಜಾತಿ ರಾಜಕಾರಣ ಮಾಡುತ್ತಿದೆ. ಬಸವಕಲ್ಯಾಣದ ಅನುಭವ ಮಂಟಪ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದ್ದು ಕಾಂಗ್ರೆಸ್. ಆದರೆ ಬಿಜೆಪಿ ಸರ್ಕಾರ ತನ್ನ ಸಾಧನೆ ಅಂತಾ ಚುನಾವಣೆ ಪ್ರಣಾಳಿಕೆಯಲ್ಲಿ ಹಾಕಿಕೊಂಡಿದೆ. ಸ್ವರ್ಗವನ್ನೇ ಧರೆಗೆ ತರ್ತಿವಿ ಅಂತಾ ಹೇಳಿದ್ದ ಬಿಜೆಪಿ ನಾಯಕರು ಇದೀಗ ನರಕ ಸೃಷ್ಟಿಸಿದ್ದಾರೆ ಎಂದು ಖಂಡ್ರೆ ಕಿಡಿಕಾರಿದರು.

ABOUT THE AUTHOR

...view details