ಕರ್ನಾಟಕ

karnataka

ಪಹಣಿ ಮತ್ತಿತರ ದಾಖಲೆಗಳಿಗೆ ಪಟ್ಟಣ ಅಲೆಯಬೇಕಿಲ್ಲ, ಗ್ರಂಥಾಲಯಗಳಲ್ಲೇ ಡಿಜಿಟಲ್ ಕಿಯೋಸ್ಕ್

ಗ್ರಾಮೀಣ ಪ್ರದೇಶದಲ್ಲಿರುವ ರೈತರು ಡಿಜಿಟಲ್ ಸೇವೆಗಳಿಗಾಗಿ ಹೋಬಳಿ ಅಥವಾ ಪಟ್ಟಣ ಪ್ರದೇಶಗಳಿಗೆ ಅಲೆಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಕಿಯೋಸ್ಕ್ ಕೇಂದ್ರ ಸ್ಥಾಪಿಸಲಾಗಿದ್ದು,ಇದರಿಂದ ವಿವಿಧ ರೀತಿಯ ಸೇವೆಗಳನ್ನು ಜನರು ಪಡೆಯಲು ಸಹಕಾರಿಯಾಗಿದೆ.

By

Published : Jun 26, 2019, 10:33 AM IST

Published : Jun 26, 2019, 10:33 AM IST

ಕಲಬುರಗಿ

ಕಲಬುರಗಿ:ಗ್ರಾಮೀಣ ಪ್ರದೇಶದಲ್ಲಿರುವ ರೈತರು ವಿವಿಧ ರೀತಿಯ ಡಿಜಿಟಲ್ ಸೇವೆಗಳಿಗಾಗಿ ಹೋಬಳಿ ಅಥವಾ ಪಟ್ಟಣ ಪ್ರದೇಶಗಳಿಗೆ ಅಲೆಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಭಾಗದಲ್ಲಿ ಪ್ರಾಯೋಗಿಕವಾಗಿ ಕಿಯೋಸ್ಕ್ ಕೇಂದ್ರ ಸ್ಥಾಪಿಸಲಾಗಿದೆ ಎಂದು ಹೈ-ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಸುಬೋಧ ಯಾದವ್​ ತಿಳಿಸಿದರು.

ಪ್ರಾದೇಶಿಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಹೈ-ಕ ಮಂಡಳಿಯಿಂದ ಕಲಬುರಗಿ, ಬೀದರ್​​, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯ ಒಟ್ಟು 70 ಗ್ರಾಮ ಪಂಚಾಯಿತಿಯ ಕೇಂದ್ರಸ್ಥಾನದ ಗ್ರಂಥಾಲಯಗಳಲ್ಲಿ ಪ್ರಾಯೋಗಿಕವಾಗಿ ಕಿಯೋಸ್ಕ್ ಕೇಂದ್ರ ಸ್ಥಾಪಿಸಲಾಗಿದೆ. ರೈತಾಪಿ ವರ್ಗ ಮತ್ತು ಸಾರ್ವಜನಿಕರು ಸಣ್ಣಪುಟ್ಟ ಡಿಜಿಟಲ್ ಸೇವೆಗಳಿಗೂ ಹೋಬಳಿ ಅಥವಾ ಪಟ್ಟಣ ಪ್ರದೇಶಗಳಿಗೆ ಅಲೆದಾಡುವುದನ್ನು ತಪ್ಪಿಸಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಯೋಸ್ಕ್ ಕೇಂದ್ರ ಸ್ಥಾಪಿಸಲಾಗಿದೆ. ಕಿಯೋಸ್ಕ್ ಕೇಂದ್ರದಲ್ಲಿ ಪಹಣಿ ಪತ್ರಿಕೆ ಸೇರಿದಂತೆ ಅಂತರ್ಜಾಲ ಆಧಾರಿತ ವಿವಿಧ ಸೇವೆಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಕಿಯೋಸ್ಕ್ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಶುಲ್ಕದ ಆಧಾರದ ಮೇಲೆ ಸೈಬರ್ ಕೆಫೆ ಮಾದರಿಯ ವಿವಿಧ ಸೇವೆಗಳನ್ನು ಪಡೆಯಲು ಈ ಯೋಜನೆ ಸಹಕಾರಿಯಾಗಲಿದೆ. ಇದರ ಭಾಗವಾಗಿ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಇದುವರೆಗೆ ತಲಾ 6 ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಡಿಜಿಟಲ್ ಕಿಯೋಸ್ಕ್ ಕೇಂದ್ರಗಳು ಸ್ಥಾಪಿಸಲಾಗಿದ್ದು, ಬ್ರಾಡ್‍ಬ್ಯಾಂಡ್ ಸಂಪರ್ಕ ಇಲ್ಲದೆ ಸೇವೆ ಆರಂಭಿಸದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಇವುಗಳಿಗೆ ಜು.06 ರೊಳಗೆ ಬ್ರಾಡ್‍ಬ್ಯಾಂಡ್ ಸಂಪರ್ಕ ಒದಗಿಸಬೇಕು ಎಂದು ಬಿಎಸ್ಎನ್ಎಲ್ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯ ಗ್ರಂಥಾಲಯಗಳ ಅಧಿಕಾರಿಗಳು ಮತ್ತು ಬಿಎಸ್ಎನ್ಎಲ್ ಸಂಸ್ಥೆಯ ಅಧಿಕಾರಿಗಳು ಭಾಗಿಯಾಗಿದ್ದರು.

For All Latest Updates

TAGGED:

ABOUT THE AUTHOR

...view details