ಕಲಬುರಗಿ:ಇಂದು ಕಲಬುರಗಿ-ಯಾದಗಿರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಚುನಾವಣೆ ಮುನ್ನವೇ ಕಾಂಗ್ರೆಸ್ ಬೆಂಬಲಿತ ಸದಸ್ಯರಿಗೆ ಬಿಗ್ ಶಾಕ್ ಆಗಿದ್ದು, ಕಾಂಗ್ರೆಸ್ ಬೆಂಬಲಿತ ಮೂವರು ಸದಸ್ಯರ ಸದಸ್ಯತ್ವ ಅನರ್ಹಗೊಳಿಸಲಾಗಿದೆ.
ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಬೆಂಬಲಿತ ಮೂವರು ಸದಸ್ಯರ ಸದಸ್ಯತ್ವ ಅನರ್ಹ - ಕಲಬುರಗಿ ಲೇಟೆಸ್ಟ್ ನ್ಯೂಸ್
ಕಲಬುರಗಿ-ಯಾದಗಿರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ಇಂದು ದಿನಾಂಕ ನಿಗದಿಯಾಗಿದ್ದು, ಚುನಾವಣೆ ಮುನ್ನವೇ ಕಾಂಗ್ರೆಸ್ ಬೆಂಬಲಿತ ಮೂವರು ಸದಸ್ಯರ ಸದಸ್ಯತ್ವ ಅನರ್ಹಗೊಳಿಸಲಾಗಿದೆ.
ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಬೆಂಬಲಿತ ಮೂರು ಸದಸ್ಯರು ಅನರ್ಹ
ಕಾಂಗ್ರೆಸ್ ಬೆಂಬಲಿತ ಗೌತಮ ಪಾಟೀಲ್, ಸೋಮಶೇಖರ ಗೋನಾಯಕ್, ಬಾಪುಗೌಡ ಪಾಟೀಲ್ ಅವರ ಸದಸ್ಯತ್ವ ಅನರ್ಹಗೊಳಿಸಲಾಗಿದೆ. ಮೂವರು ಸದಸ್ಯರನ್ನು ಅನರ್ಹಗೊಳಿಸಲಾಗಿದ್ದು, ಬಹುಮತಕ್ಕೆ ಬೇಕಾದ ಸಂಖ್ಯೆ 7ಕ್ಕೆ ಇಳಿಕೆಯಾಗಿದೆ. ರಾಯಚೂರು ಸಹಕಾರಿ ಸಂಘಗಳ ಜಂಟಿ ನಿರ್ದೇಶಕರು ವಿವಿಧ ಕಾರಣಗಳನ್ನು ನೀಡಿ, ಈ ಮೂವರು ಸದಸ್ಯರನ್ನು ಅನರ್ಹಗೊಳಿಸಿ ಆದೇಶಿದ್ದಾರೆ.
ಈ ನಡುವೆ ಅಧ್ಯಕ್ಷ ಸ್ಥಾನಕ್ಕೆ ಶಾಸಕ ರಾಜಕುಮಾರ ಪಾಟೀಲ್, ಚುನಾವಣಾಧಿಕಾರಿ ಬಲರಾಮ್ಗೆ ನಾಮಪತ್ರ ಸಲ್ಲಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಶಿವರಾಜ್ ಸಜ್ಜನ್ ನಾಮಪತ್ರ ಸಲ್ಲಿಸಿದ್ದಾರೆ.