ಕರ್ನಾಟಕ

karnataka

ETV Bharat / state

ನಾನು ಪಂಚಮಸಾಲಿ ಮೀಸಲಾತಿ ಪರವಾಗಿರುವೆ: ಮಾಲೀಕಯ್ಯ ಗುತ್ತೇದಾರ್ ಸ್ಪಷ್ಟನೆ - ಪಂಚಮಸಾಲಿ ಸಮಾಜ ಹೋರಾಟ

ಪಂಚಮಸಾಲಿ ಸಮುದಾಯಕ್ಕೆ 2ಎ ನೀಡಲು ನಾನು ವಿರೋಧ ವ್ಯಕ್ತಪಡಿಸಿದ್ದೇನೆ ಎಂದು ಮಾಧ್ಯಮಗಳಲ್ಲಿ ನನ್ನ ಹೇಳಿಕೆ ತಿರುಚಲಾಗಿದೆ. ಇದು ಸತ್ಯಕ್ಕೆ ದೂರವಾದ ಮಾತು, ನಾನು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿರೋಧಿಸಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್ ತಿಳಿಸಿದ್ದಾರೆ.

ex minister malikaiah guttedar reaction over reservation for panchamsali
ಮಾಲೀಕಯ್ಯ ಗುತ್ತೇದಾರ್ ಸ್ಪಷ್ಟನೆ

By

Published : Feb 21, 2021, 1:29 PM IST

ಕಲಬುರಗಿ:ನಾನು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿರೋಧಿ ಅಲ್ಲ, ನಾನು ಮೀಸಲಾತಿ ಪರವಾಗಿರುವೆ ಎಂದು ಮಾಜಿ ಸಚಿವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್ ಸ್ಪಷ್ಟನೆ ನೀಡಿದ್ದಾರೆ.

ಮಾಲೀಕಯ್ಯ ಗುತ್ತೇದಾರ್ ಸ್ಪಷ್ಟನೆ
ಈ ಕುರಿತು ಪ್ರತಿಕ್ರಿಯೆ ನೀಡಿರುವ ಗುತ್ತೇದಾರ, ಪಂಚಮಸಾಲಿ ಸಮುದಾಯಕ್ಕೆ 2ಎ ನೀಡಲು ನಾನು ವಿರೋಧ ವ್ಯಕ್ತಪಡಿಸಿದ್ದೇನೆ ಎಂದು ಮಾಧ್ಯಮಗಳಲ್ಲಿ ನನ್ನ ಹೇಳಿಕೆ ತಿರುಚಲಾಗಿದೆ. ಇದು ಸತ್ಯಕ್ಕೆ ದೂರವಾದ ಮಾತು, ನಾನು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿರೋಧಿಸಿಲ್ಲ. ಬದಲಾಗಿ ಹೋರಾಟವನ್ನು ಸ್ವಾಗತಿಸಿರುವೆ. ಪ್ರತಿಯೊಂದು ಸಮಾಜಕ್ಕೆ ಹೋರಾಟ ಮಾಡುವ ಹಕ್ಕಿದೆ. ಪಂಚಮಸಾಲಿಯಲ್ಲಿ ಸಹ ಒಕ್ಕಲಿಗರು ಸೇರಿದಂತೆ ಹಲವರು ಬಡವರಿದ್ದಾರೆ. ತಜ್ಞರ ಸಮಿತಿ ರಚಿಸುವ ಯಾವ ವರ್ಗದಲ್ಲಿ ಬಡವರಿದ್ದಾರೋ, ಯಾರಿಗೆ ಮೀಸಲಾತಿ ಅವಶ್ಯಕತೆ ಇದೆ ಎಂಬುದರ ಬಗ್ಗೆ ಸರ್ಕಾರದಿಂದ ವರದಿ ತರಿಸಿಕೊಳ್ಳಲಾಗುತ್ತದೆ ಎಂದ್ರು.
ಈಡಿಗ ಸಮಾಜ ಕೂಡ ಅತ್ಯಂತ ಹಿಂದುಳಿದ ಸಮಾಜವಾಗಿದೆ. ಈಡಿಗ ಸಮಾಜಕ್ಕೂ ಮೀಸಲಾತಿ ಅವಶ್ಯಕತೆ ಇದೆ. ಪಂಚಮಸಾಲಿ ಹೋರಾಟಕ್ಕೆ ನಾನು ಶುಭ ಹಾರೈಸುತ್ತೇನೆ. ಅವರ ಹೋರಾಟ ಯಶಸ್ವಿಯಾಗಲಿ ಎಂದು ಮಾಲೀಕಯ್ಯ ಗುತ್ತೇದಾರ್ ಹೇಳಿದ್ದಾರೆ.

ABOUT THE AUTHOR

...view details