ಕಲಬುರಗಿ:ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕಲಬುರಗಿ ಜಿಲ್ಲೆಯಾದ್ಯಂತ ಮೇ.31ರವರೆಗೆ ನಿಷೇಧಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.
ಹೆಚ್ಚುತ್ತಿರುವ ಕೊರೊನಾ ಕಟ್ಟಿಹಾಕಲು ಕಲಬುರಗಿಯಲ್ಲಿ ನಿಷೇಧಾಜ್ಞೆ ವಿಸ್ತರಣೆ - Culinary Corona Cases
ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕಲಬುರಗಿ ಜಿಲ್ಲೆಯಾದ್ಯಂತ ಮೇ.31ರವರೆಗೆ ನಿಷೇಧಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.
ಹೆಚ್ಚುತ್ತಿರುವ ಕೊರೊನಾ ನಿಯಂತ್ರಿಸಲು ಕಲಬುರಗಿಯಲ್ಲಿ ನಿಷೇಧಾಜ್ಞೆ ವಿಸ್ತರಣೆ
ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಸಿಆರ್ಪಿಸಿ 1973 ಕಲಂ 144 ಸೆಕ್ಷನ್ ಅಡಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವಿಸ್ತರಿಸಲಾಗಿದೆ. ನಿನ್ನೆ ಮತ್ತೆ 8 ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 94 ಕೊರೊನಾ ಕೇಸ್ ಪತ್ತೆಯಾಗಿವೆ. ಇಲ್ಲಿಯವರೆಗೆ ಏಳು ಜನ ಮಹಾಮಾರಿಗೆ ಬಲಿಯಾಗಿದ್ದಾರೆ.