ಕಲಬುರಗಿ:ಕೊರೊನಾ ವೈರಸ್ ತಡೆಗಟ್ಟುವ ಮತ್ತು ಜನಸಂದಣಿ ನಿಯಂತ್ರಣದಲ್ಲಿಡಲು ಈಗಾಗಲೇ ಕಲಬುರಗಿ ಜಿಲ್ಲೆಯಾದ್ಯಂತ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು 2020ರ ಏಪ್ರಿಲ್ 30ರವರೆಗೆ ವಿಸ್ತರಿಸಿ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಇಂದು ಆದೇಶ ಹೊರಡಿಸಿದ್ದಾರೆ.
ಕಲಬುರಗಿಯಲ್ಲಿ ಏ. 30ರವರೆಗೆ ನಿಷೇಧಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶ - ಜಿಲ್ಲಾಧಿಕಾರಿ ಶರತ್. ಬಿ ಲೆಟೆಸ್ಟ್ ನ್ಯೂಸ್
ಕೊರೊನಾ ವೈರಸ್ ಹರಡದಂತೆ ಮುಂಜಾಗೃತಾ ಕ್ರಮವಾಗಿ ಕಲಬುರಗಿ ಜಿಲ್ಲೆಯಾದ್ಯಂತ 2020ರ ಮಾರ್ಚ್ 19ರ ರಾತ್ರಿ 8 ಗಂಟೆಯಿಂದ ಏಪ್ರಿಲ್ 14ರ ರಾತ್ರಿ 8 ಗಂಟೆಯವರೆಗೆ ಒಟ್ಟು 26 ದಿನಗಳವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಆದರೆ ಈಗ ಪರಿಸ್ಥಿತಿಯ ಅಗತ್ಯತೆಯನ್ನು ಮನಗಂಡು ಜಿಲ್ಲಾಧಿಕಾರಿಗಳು 2020ರ ಏಪ್ರಿಲ್ 30ರವರೆಗೆ ನಿಷೇಧಾಜ್ಞೆಯನ್ನು ವಿಸ್ತರಿಸಿದ್ದಾರೆ.
![ಕಲಬುರಗಿಯಲ್ಲಿ ಏ. 30ರವರೆಗೆ ನಿಷೇಧಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶ Kalburagi DC Sarath. B. Order](https://etvbharatimages.akamaized.net/etvbharat/prod-images/768-512-6781838-410-6781838-1586800259921.jpg)
ಕಲಬುರಗಿ ಜಿಲ್ಲಾಧಿಕಾರಿ ಶರತ್. ಬಿ.
ಅಲ್ಲದೇ ಈ ಆದೇಶ ಅಗತ್ಯ ಸೇವೆಗಳಿಗೆ ಅನ್ವಯವಾಗುವುದಿಲ್ಲ. ಈ ಆದೇಶದಿಂದ ಭಯ ಪಟ್ಟು ಅಗತ್ಯಕ್ಕಿಂತ ಹೆಚ್ಚು ಅವಶ್ಯ ದಾಸ್ತಾನುಗಳನ್ನು ಸಹ ಖರೀದಿಸುವ ಅಗತ್ಯವಿಲ್ಲ ಎಂದು ಅವರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.