ಕಲಬುರಗಿ:ಮನೆಯಲ್ಲಿ ಮಲಗಿದ್ದ ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಶಹಾಬಾದ್ ಪಟ್ಟಣದಲ್ಲಿ ನಡೆದಿದೆ.
ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಬರ್ಬರ ಕೊಲೆ - undefined
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಮಲಗಿದ್ದ ವೇಳೆ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಶಹಾಬಾದ್ ಪಟ್ಟಣದಲ್ಲಿ ನಡೆದಿದೆ.
Kalburgi
ನಾಗರೆಡ್ಡಿ ಕಲ್ಲೋಳಿ(26) ಕೊಲೆಯಾದ ವ್ಯಕ್ತಿ. ಕೆಲದಿನಗಳ ಹಿಂದೆ ಪತಿ - ಪತ್ನಿ ನಡುವೆ ಜಗಳ ಉಂಟಾಗಿ ಪತ್ನಿ ತವರು ಮನೆಗೆ ಹೋಗಿದ್ದರು. ಆಕೆಯ ಮನೆಯವರೇ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು,ಹೆಂಡತಿ ಕಡೆಯವವರೆ ಕೊಲೆ ಮಾಡಿರುವುದಾಗಿ ನಾಗರೆಡ್ಡಿ ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಸಂಬಂಧ ಶಹಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಘಟನಾ ಸ್ಥಳಕ್ಕೆ ಶಹಾಬಾದ್ ಸಿಪಿಐ ಕಪಿಲ್ ದೇವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.