ಕಲಬುರಗಿ :ಸತತ ಮಳೆಯಿಂದ ಹೆಸರು, ಉದ್ದು, ಸೋಯಾಬಿನ್ ಬಿತ್ತನೆ ಬೆಳೆ ಹಾನಿಯಾಗಿದೆ. ಕೂಡಲೇ ಪ್ರತಿ ಎಕರೆಗೆ ರೂ.20 ಸಾವಿರ ಪರಿಹಾರ ಘೋಷಿಸಬೇಕು ಎಂದು ಕಲ್ಯಾಣ ಕರ್ನಾಟಕ ರೈತಪರ ಸಂಘದ ಕಾರ್ಯದರ್ಶಿ ಬಿ ಬಿ ನಾಯಕ್ ಒತ್ತಾಯಿಸಿದ್ದಾರೆ.
ಪ್ರತಿ ಎಕರೆಗೆ ₹20 ಸಾವಿರ ಪರಿಹಾರ ಘೋಷಿಸುವಂತೆ ರೈತಸಂಘ ಆಗ್ರಹ - Center for Agricultural Sciences
ಕೃಷಿ ವಿಜ್ಞಾನ ಕೇಂದ್ರ ಇರುವುದರಿಂದ ಪ್ರತಿವರ್ಷ ಕೃಷಿ ಮೇಳ ಹಮ್ಮಿಕೊಳ್ಳಬೇಕು. ನಷ್ಟವಾಗಿರುವ ಬೆಳೆ ಸಮೀಕ್ಷೆ ಮಾಡಿ ರೈತರಿಗೆ ಪರಿಹಾರ ನೀಡಬೇಕು. ಪ್ರತಿದಿನ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ..
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಡಲೇ ಹೆಸರು, ಉದ್ದು ಖರೀದಿ ಕೇಂದ್ರ ಪ್ರಾರಂಭ ಮಾಡಬೇಕು ಎಂದು ಒತ್ತಾಯಿಸಿದರು. 15 ರೂಪಾಯಿಗೆ ಇದ್ದ ಪಹಣಿಯನ್ನು 5 ರೂಪಾಯಿಗೆ ನೀಡುವ ವ್ಯವಸ್ಥೆ ಮಾಡಬೇಕು. 2000 ಸಾವಿರ ರೂಪಾಯಿ ಮಾಶಾಸನ ಕೊಡಬೇಕು ಎಂದು ಆಗ್ರಹಿಸಿದರು.
ಅಲ್ಲದೆ ಕೃಷಿ ವಿಜ್ಞಾನ ಕೇಂದ್ರ ಇರುವುದರಿಂದ ಪ್ರತಿವರ್ಷ ಕೃಷಿ ಮೇಳ ಹಮ್ಮಿಕೊಳ್ಳಬೇಕು. ನಷ್ಟವಾಗಿರುವ ಬೆಳೆ ಸಮೀಕ್ಷೆ ಮಾಡಿ ರೈತರಿಗೆ ಪರಿಹಾರ ನೀಡಬೇಕು. ಪ್ರತಿದಿನ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಕೂಡಲೇ ರಾಷ್ಟ್ರೀಕೃತ ಬ್ಯಾಂಕುಗಳ ಸಾಲಾ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.