ಕಲಬುರಗಿ: ಡಿಸಿಸಿ ಬ್ಯಾಂಕ್ ಉಳಿಸಬೇಕು ಮತ್ತು ರೈತರ ಸಾಲ ಮನ್ನಾ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ರೈತರ ಸಮಾವೇಶ ನಡೆಯಿತು.
ಸಾಲ ಮನ್ನಾ ಹಣ ಬಿಡುಗಡೆಗೆ ಆಗ್ರಹಿಸಿ ರೈತ ಸಮಾವೇಶ
ರೈತರಿಗೆ ಸುಲಭ ಸಾಲ ನೀಡಬಲ್ಲ ಸಹಕಾರಿ ಬ್ಯಾಂಕುಗಳನ್ನು ಗ್ರಾಮೀಣ ಮಟ್ಟದಲ್ಲಿ ಪುನಃ ಆರಂಭಿಸಬೇಕು. ಸಾಲ ಮನ್ನಾ ಹಣವನ್ನು ರೈತರ ಖಾತೆಗಳಿಗೆ ನೇರವಾಗಿ ಜಮಾ ಮಾಡಬೇಕು ಎಂದು ಸಮಾವೇಶದಲ್ಲಿ ಆಗ್ರಹಿಸಲಾಯಿತು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಒಕ್ಕೂಟ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಸಂಯುಕ್ತಾಶ್ರಯದಲ್ಲಿ ಗಂಜ್ ಪ್ರದೇಶದ ರೈತ ಭವನದಲ್ಲಿ ಹಮ್ಮಿಕೊಂಡಿದ್ದ ಸಮಾವೇಶಕ್ಕೆ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್ ಅವ್ಯವಹಾರದಿಂದಾಗಿ ಜಿಲ್ಲೆಯ ರೈತರಿಗೆ ಸಾಲ ಮನ್ನಾ ಲಾಭ ಸಿಗದಂತಾಗಿದೆ. ಆದ್ದರಿಂದ ರೈತರಿಗೆ ಸುಲಭ ಸಾಲ ನೀಡಬಲ್ಲ ಸಹಕಾರಿ ಬ್ಯಾಂಕುಗಳನ್ನು ಗ್ರಾಮೀಣ ಮಟ್ಟದಲ್ಲಿ ಪುನಃ ಆರಂಭಿಸಬೇಕು. ಸಾಲ ಮನ್ನಾ ಹಣವನ್ನು ರೈತರ ಖಾತೆಗಳಿಗೆ ನೇರವಾಗಿ ಜಮಾ ಮಾಡಬೇಕು ಹಾಗೂ ಡಿಸಿಸಿ ಬ್ಯಾಂಕ್ನಲ್ಲಿ ನಡೆದ ಅವ್ಯವಹಾರದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿದರು.