ಕಲಬುರಗಿ:ಸಕಾಲಕ್ಕೆ ಶೇಂಗಾಬಿತ್ತನೆ ಬೀಜ ಸಿಗದೇ ಇರುವುದಕ್ಕೆ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದಾರೆ.
ಸಕಾಲಕ್ಕೆ ಕೈಗೆಟುಕದ ಬಿತ್ತನೆ ಬೀಜ: ಶೇಂಗಾ ಬೆಳೆಗಾರರ ಪ್ರತಿಭಟನೆ - ಕಲಬುರಗಿಯ ಅಳ್ಳೊಳ್ಳಿಯ ರೈತ ಸಂಪರ್ಕ ಕೇಂದ್ರದಲ್ಲಿ ರೈತರು ಪ್ರತಿಭಟನೆ
ಸಕಾಲಕ್ಕೆ ಶೇಂಗಾ ಬಿತ್ತನೆ ಬೀಜ ಸಿಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ಚಿತ್ತಾಪೂರ ತಾಲೂಕಿನ ಅಳ್ಳೊಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ರೈತರಿಂದ ಪ್ರತಿಭಟನೆ
ಜಿಲ್ಲೆಯ ಬಹುತೇಕ ಕಡೆ ಮಳೆಯಾಗುತ್ತಿದೆ. ಆದ್ರೆ ಸಕಾಲದಲ್ಲಿ ಬಿತ್ತನೆಗೆ ಶೇಂಗಾ ಬೀಜ ಸಿಗುತ್ತಿಲ್ಲ ಎನ್ನುವ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚಿತ್ತಾಪೂರ ತಾಲೂಕಿನ ಅಳ್ಳೊಳ್ಳಿಯ ರೈತ ಸಂಪರ್ಕ ಕೇಂದ್ರದ ಜಮಾಯಿಸಿದ ಬೆಳೆಗಾರರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ರು.
ಸ್ಥಳಕ್ಕೆ ಯಾವುದೇ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆ ಆಲಿಸದೇ ಇರುವುದು ರೈತರು ಕೋಪ ಮತ್ತಷ್ಟು ಹೆಚ್ಚುವಂತೆ ಮಾಡಿದೆ.