ಕರ್ನಾಟಕ

karnataka

ETV Bharat / state

ಲಾಕ್​ಡೌನ್​ನಿಂದ ಸಂಕಷ್ಟದಲ್ಲಿ ಕಾಫಿ ಬೆಳೆಗಾರರು: ಸಚಿವ ಸಿ.ಟಿ.ರವಿ - ಕಾಫಿ ಬೆಳೆಗಾರರ ಸಂಕಷ್ಟ

ಚಿಕ್ಕಮಗಳೂರಿನ ಕಾಫಿ, ಮೆಣಸು ಬೆಳೆಗಾರರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕಿದೆ. ಇಲ್ಲವಾದರೆ ರೈತರು, ಕಾರ್ಮಿಕರು ಸಂಕಷ್ಟ ಅನುಭವಿಸಬೇಕಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹೇಳಿದರು.

coffee growers
ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ

By

Published : Apr 19, 2020, 7:03 PM IST

ಚಿಕ್ಕಮಗಳೂರು: ದೇಶಾದ್ಯಂತ ಲಾಕ್‌ಡೌನ್ ಜಾರಿಯಾದ ಹಿನ್ನೆಲೆ ಜಿಲ್ಲೆಯ ಕಾಫಿ ಬೆಳೆಗಾರರು ಸಂಕಷ್ಟಕ್ಕೊಳಗಾಗಿದ್ದಾರೆ. ಕಾಫಿ ಬೆಳೆಗೆ ಸೂಕ್ತ ಮಾರುಕಟ್ಟೆ ಇಲ್ಲದೇ ಹಲವು ಸಮಸ್ಯೆಗಳು ಎದುರಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯ ರೈತರು ಬೆಳೆದ ಕಾಫಿ, ಮೆಣಸು, ಅಡಕೆಗಳಿಗೆ ಸೂಕ್ತ ಮಾರುಕಟ್ಟೆ ಸಿಗದೆ, ಆರ್ಥಿಕ ನಷ್ಟ ಎದುರಾಗಿದೆ. ರೈತರಿಗೆ ಸೂಕ್ತ ಮಾರುಕಟ್ಟೆಯನ್ನು ದೊರಕಿಸಿ ಅವರ ಸಂಕಷ್ಟಗಳಿಗೆ ನೆರವಾಗಬೇಕಿದೆ. ಇಲ್ಲವಾದರೆ ರೈತರು ಬಹಳ ನಷ್ಟ ಅನುಭವಿಸಲಿದ್ದಾರೆ ಎಂದರು.

ಬಡತನ ರೇಖೆಗಿಂತ ಕೆಳಗಿರುವವರು, ಕೂಲಿ, ಕಟ್ಟಡ ಕಾರ್ಮಿಕರು, ಮಧ್ಯಮ ವರ್ಗದವರು ಆರ್ಥಿಕವಾಗಿ ತೊಂದರೆಗೆ ಒಳಗಾಗಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಂಡು ಕೂಲಿ ಕೆಲಸಗಳಿಗೆ ತೆರಳಲು ಅವಕಾಶ ಕಲ್ಪಿಸುವುದಾಗಿ ಹೇಳಿದರು.

ಈಗಾಗಲೇ ಆಹಾರ ಪಡಿತರ ನೀಡಲಾಗಿದ್ದು, ತಾಲೂಕು ಹಾಗೂ ಗ್ರಾಮಗಳಲ್ಲಿ ಬಿಪಿಎಲ್ ಕಾರ್ಡ್ ಹೊಂದದೇ ಇರುವ ಜನರಿಗೆ, ಪೌರಕಾರ್ಮಿಕರಿಗೆ, ಕಟ್ಟಡ, ಕೂಲಿ ಕಾರ್ಮಿಕರಿಗೂ ಆಹಾರ ಪಡಿತರವನ್ನು ವಿತರಿಸಬೇಕು. ಪಡಿತರ ಗುಣಮಟ್ಟವನ್ನು ಪರೀಕ್ಷಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೊರೊನಾ ಸೋಂಕು ಬಾರದಂತೆ ತಡೆಯಲು ಜಿಲ್ಲೆಯಲ್ಲಿ 54 ತಂಡಗಳನ್ನು ರಚನೆ ಮಾಡಲಾಗಿದ್ದು, 940 ಆಶಾ ಕಾರ್ಯಕರ್ತೆಯರು ಮನೆ, ಮನೆಗಳಿಗೆ ತೆರಳಿ ಕೊರೊನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಇನ್ನು ತಾಲೂಕುಗಳಲ್ಲಿ ಹೆಚ್ಚಿನ ವೈದ್ಯರ ಅವಶ್ಯಕತೆ ಇದೆ. ಲ್ಯಾಬ್ ತಂತ್ರಜ್ಞರು ಹಾಗೂ ನುರಿತ ವೈದ್ಯರನ್ನು ಕರೆಸಿಕೊಳ್ಳಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ABOUT THE AUTHOR

...view details