ಕಲಬುರಗಿ:ಪ್ರಾರ್ಥನಾ ಮಂದಿರದಲ್ಲಿರುವ ಶಿವಲಿಂಗ ಪೂಜೆಗೆ ಸಂಬಂಧಿಸಿದಂತೆ ಜಿಲ್ಲೆಯ ಆಳಂದ ನಗರದಲ್ಲಿ ಮಂಗಳವಾರ ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಪ್ರತ್ಯೇಕ ಎಫ್ಐಆರ್ ದಾಖಲಾಗಿವೆ. ಘಟನೆ ಕುರಿತಂತೆ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.
ಗಲಾಟೆ ಸಂದರ್ಭದಲ್ಲಿ ಸಂಸದ, ಶಾಸಕರು, ಪೊಲೀಸ್, ಮಾಧ್ಯಮದವರ ವಾಹನಗಳ ಮೇಲೆ ಕಲ್ಲು ತೂರಾಟ ಕೂಡ ನಡೆದಿತ್ತು. ನಾಲ್ಕು ಪ್ರತ್ಯೇಕ ಎಫ್ಐಆರ್ಗಳಲ್ಲಿ 60ಕ್ಕೂ ಅಧಿಕ ಜನರ ಮೇಲೆ ಪ್ರಕರಣ ದಾಖಲಾಗಿದೆ. ಅಲ್ಲದೆ, ಪೊಲೀಸರು ಈಗಾಗಲೇ 56 ಜನರನ್ನು ವಶಕ್ಕೆ ಪಡೆದು ವಿಚಾರಣೆ ಕೂಡಾ ನಡೆಸುತ್ತಿದ್ದಾರೆ. ಇನ್ನೂ ಹಲವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.