ಕಲಬುರಗಿ:ರೆಸ್ಟೋರೆಂಟ್ನಲ್ಲಿ ಆಕಸ್ಮಿಕ ಬೆಂಕಿ ಹತ್ತಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣದಲ್ಲಿ ನಡೆದಿದೆ.
ಕಲಬುರಗಿ: ರೆಸ್ಟೋರೆಂಟ್ ನಲ್ಲಿ ಆಕಸ್ಮಿಕ ಬೆಂಕಿ, ಅಪಾರ ವಸ್ತುಗಳು ಬೆಂಕಿಗಾಹುತಿ - kannadanews
ರೆಸ್ಟೋರೆಂಟ್ನಲ್ಲಿ ಆಕಸ್ಮಿಕ ಬೆಂಕಿ ಹತ್ತಿಕೊಂಡ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ರೆಸ್ಟೋರೆಂಟ್ ನಲ್ಲಿ ಆಕಸ್ಮಿಕ ಬೆಂಕಿ
ಜೇವರ್ಗಿ ಪಟ್ಟಣದಲ್ಲಿನ ಶರಣ ಕೃಪಾ ಬಾರ್ ಮತ್ತು ರೆಸ್ಟೋರೆಂಟ್ನಲ್ಲಿ ದುರ್ಘಟನೆ ಸಂಭವಿಸಿದೆ. ಏಕಾಏಕಿ ಬೆಂಕಿ ಹತ್ತಿಕೊಂಡಿದ್ದು, ನೋಡುನೋಡುತ್ತಲೆ ರೆಸ್ಟೋರೆಂಟ್ ತುಂಬಾ ಆವರಿಕೊಂಡಿದೆ. ಬೆಂಕಿಯಿಂದಾಗಿ ಬಾರ್ನ ಕೌಂಟರ್ ಮತ್ತು ಪೀಠೋಪಕರಣಗಳು ಸುಟ್ಟು ಕರಕಲಾಗಿವೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Last Updated : Jun 23, 2019, 5:19 PM IST