ಕಲಬುರಗಿ:ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಭರ್ಜರಿ ತಯಾರಿ ನಡೆದಿದ್ದು, ನಾಮಪತ್ರಗಳ ಪರಿಶೀಲನೆ ನಡೆದು ಐವರು ಚುನಾವಣಾ ಕಣದಲ್ಲಿ ಉಳಿದಿದ್ದಾರೆ.
ಅಕ್ಟೋಬರ್ 28ರಂದು ನಡೆಯುವ ಚುನಾವಣೆಗೆ ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನಾ ಕಾರ್ಯ ಶುಕ್ರವಾರ ನಡೆದಿದ್ದು, ಒಟ್ಟು ಐದು ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ. 3 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕತಗೊಂಡಿವೆ ಎಂದು ಕ್ಷೇತ್ರದ ಚುನಾವಣಾಧಿಕಾರಿ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಎನ್.ವಿ. ಪ್ರಸಾದ್ ಅವರು ತಿಳಿಸಿದ್ದಾರೆ.