ಕಲಬುರಗಿ: ಕರ್ತವ್ಯ ಲೋಪದ ಆರೋಪದ ಮೇಲೆ ಒಂದೇ ದಿನದಲ್ಲಿ ವಿವಿಧ ಇಲಾಖೆಯ ಐವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆಯಾ ವಿಭಾಗದ ಮುಖ್ಯಸ್ಥರು ಆದೇಶ ಹೊರಡಿಸಿದ್ದಾರೆ.
ಒಂದೇ ದಿನದಲ್ಲಿ ವಿವಿಧ ಇಲಾಖೆಯ ಐವರು ಅಮಾನತು! - police department
ಶಿಕ್ಷಣ ಹಾಗೂ ಪೊಲೀಸ್ ಇಲಾಖೆಯ ಐವರು ಸರ್ಕಾರಿ ನೌಕರರನ್ನು ಅಮಾನತುಗೊಳಿಸಲಾಗಿದೆ. ಒಂದೇ ದಿನದಲ್ಲಿ ಆಯಾ ವಿಭಾಗದ ಮುಖ್ಯಸ್ಥರು, ನೌಕರರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಚಿತ್ತಾಪುರ ತಾಲೂಕಿನ ದಂಡಗುಂಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಾಲತೇಶ್ ಅವರ ಮೇಲೆ ಹಣ ದುರುಪಯೋಗ, ಎಸ್ಡಿಎಂಸಿ ಸದಸ್ಯರೊಂದಿಗೆ ಅನುಚಿತ ವರ್ತನೆ ಮತ್ತು ಇಲಾಖೆ ವಿರುದ್ಧ ಅಪಪ್ರಚಾರ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ. ಕಲಬುರಗಿ ತಾಲೂಕಿನ ತೊನಸನಹಳ್ಳಿ(ಎಸ್)ಗ್ರಾಮದ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕಿ ನಿರ್ಮಲಾ ಅವರನ್ನು ಹಣ ದುರ್ಬಳಕೆ ಮತ್ತು ಬಿಸಿ ಊಟಕ್ಕೆ ಅಲ್ಪ ತರಕಾರಿ ಬಳಕೆ ಆರೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ. ಕಲಬುರಗಿ ನಗರದ ಜಗತ್ತ ಬಡಾವಣೆಯ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಸುವರ್ಣ ಅವರನ್ನು ಸುದೀರ್ಘ ಅವಧಿಯ ಗೈರು ಹಾಜರಿ ಹಿನ್ನೆಲೆ ಅಮಾನತು ಮಾಡಲಾಗಿದೆ. ಒಟ್ಟು ಮೂವರನ್ನು ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.
ಪೊಲೀಸ್ ಇಲಾಖೆಯಲ್ಲಿ ಮುಖ್ಯ ಪೇದೆಯೊಬ್ಬರನ್ನು ಅಮಾನತು ಮಾಡಲಾಗಿದೆ. ಸೆಪ್ಟೆಂಬರ್ 17ರಂದು ಸಿಎಂ ಪ್ರವಾಸದ ಹಿನ್ನೆಲೆ ಕಲಬುರಗಿ ನಗರಕ್ಕೆ ಕರ್ತವ್ಯ ನಿಯೋಜನೆ ಮಾಡಿದ್ದರೂ ಗೈರು ಹಾಜರಾಗಿ ಅಶಿಸ್ತು ಪ್ರದರ್ಶನ ಮಾಡಿದ ಹಿನ್ನೆಲೆಯಲ್ಲಿ ಫರತಾಬಾದ್ ಪೊಲೀಸ್ ಠಾಣೆಯ ಮುಖ್ಯಪೇದೆ 482 ಆನಂದ್ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಎಮ್.ಎನ್ ನಾಗರಾಜ್ ಆದೇಶ ಹೊರಡಿಸಿದ್ದಾರೆ.