ಕರ್ನಾಟಕ

karnataka

ETV Bharat / state

ಸೊನ್ನ ಬ್ಯಾರೇಜ್​ನಿಂದ ನೀರು ಬಿಡುಗಡೆ: ಭೀಮಾ ನದಿ ಪಾತ್ರದ ಜನರಿಗೆ ಎಚ್ಚರಿಕೆ

ಕಳೆದ ಬಾರಿ ಭೀಕರ ಪ್ರವಾಹಕ್ಕೆ ಬಲಿಯಾಗಿ ಸಂಕಷ್ಟ ಎದುರಿಸಿದ ಅಫಜಲಪುರ ಹಾಗೂ ಜೇವರ್ಗಿ ತಾಲೂಕಿನ ನದಿ ಪಾತ್ರದ ಜನರಿಗೆ ಮತ್ತೆ ಪ್ರವಾಹ ಭೀತಿ ಕಾಡತೊಡ

flood-fear-for-jevargi-people
ಸೊನ್ನ ಬ್ಯಾರೇಜ್​ನಿಂದ ನೀರು ಬಿಡುಗಡೆ

By

Published : Jul 19, 2020, 5:05 AM IST

ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಆತಂಕದ ನಡುವೆ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ಭೀಮಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ನದಿ ಪಾತ್ರದ ಜನರಲ್ಲಿ ಪ್ರವಾಹದ ಭೀತಿ ಶುರುವಾಗಿದೆ.

ಹೌದು, ಕಳೆದ ಬಾರಿ ಭೀಕರ ಪ್ರವಾಹಕ್ಕೆ ಬಲಿಯಾಗಿ ಸಂಕಷ್ಟ ಎದುರಿಸಿದ ಅಫಜಲಪುರ ಹಾಗೂ ಜೇವರ್ಗಿ ತಾಲೂಕಿನ ನದಿ ಪಾತ್ರದ ಜನರಿಗೆ ಮತ್ತೆ ಪ್ರವಾಹ ಭೀತಿ ಕಾಡತೊಡಗಿದೆ. ಮಹಾರಾಷ್ಟ್ರ, ಕರ್ನಾಟಕ ಭೀಮಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ 4 ದಿನಗಳ ಹಿಂದೆಯಷ್ಟೆ ಭೀಮಾ ನದಿಗೆ 4,500 ಕ್ಯೂಸೆಕ್​ ನೀರು ಹರಿಸಲಾಗಿತ್ತು. ಶನಿವಾರ ಮತ್ತೆ ಸೊನ್ನ ಬ್ಯಾರೇಜ್​ನಲ್ಲಿ ನೀರಿನ ಒಳಹರಿವು ಹೆಚ್ಚಿದ್ದು, ಅದರಂತೆ ಬ್ಯಾರೇಜ್​ನಿಂದ 4,000 ಕ್ಯೂಸೆಕ್ ನೀರನ್ನು ಭೀಮಾ ನದಿಗೆ ಹರಿಬಿಡಲಾಗಿದೆ ಎಂದು ಭೀಮಾ ಏತ‌ ನೀರಾವರಿ ಯೋಜನೆಯ ಕಾರ್ಯಪಾಲಕ ಅಭಿಯಂತರ ಅಶೋಕ್​ ಆರ್. ಕಲಾಲ್ ತಿಳಿಸಿದ್ದಾರೆ.

ಸೊನ್ನ ಬ್ಯಾರೇಜ್​ನಿಂದ ನೀರು ಬಿಡುಗಡೆ

ಬ್ಯಾರೇಜ್​ನಲ್ಲಿ ನೀರಿನ ಒಳಹರಿವಿನ‌ ಪ್ರಮಾಣ 4,000 ಕ್ಯೂಸೆಕ್ ಇದ್ದು, ಅಷ್ಟೇ ಪ್ರಮಾಣದ ನೀರು ನದಿಗೆ ಹರಿಬಿಡಲಾಗುತ್ತಿದೆ. ಆದರಿಂದ ನದಿ ದಂಡೆಯಲ್ಲಿರುವ ಸಾರ್ವಜನಿಕರು ನದಿಯ ದಡಕ್ಕೆ ಹೋಗದಂತೆ ಮತ್ತು ಜಾನುವಾರುಗಳನ್ನು ಬಿಡದಂತೆ ಎಚ್ಚರಿಕೆ ವಹಿಸಬೇಕು ಎಂದು ಪ್ರದೇಶದ ರೈತರಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ.

ಸೊನ್ನ ಬ್ಯಾರೇಜ್ ಸಾಮರ್ಥ್ಯ 3.16 ಟಿ‌ಎಂ‌ಸಿ ಇದ್ದು, ಬೆಳಗ್ಗೆ 2.74 ಟಿಎಂಸಿ. ನೀರು ಸಂಗ್ರಹಣಗೊಂಡಿದೆ, ಜುಲೈ ಮಾಸಾಂತ್ಯ ಮತ್ತು ಆಗಸ್ಟ್ ಮಾಹೆಯಲ್ಲಿ ಭೀಮಾ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆ ಬರುವ ಸಾಧ್ಯತೆ ಇದ್ದು, ಆಗ ನೀರಿನ ಒಳಹರಿವು ಇನ್ನೂ ಹೆಚ್ಚಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಂದು 4,000 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ ಮಳೆ ಪ್ರಮಾಣ ಹೆಚ್ಚಿದ್ದರಿಂದ ಭೀಮಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದ ಅಫಜಲಪುರ ಹಾಗೂ ಜೇವರ್ಗಿ ತಾಲೂಕಿನ ನದಿ‌ ಪಾತ್ರದ ಗ್ರಾಮದ ಜನ ಪ್ರವಾಹ ಭೀತಿಯಲ್ಲಿ ಜೀವನ ಸಾಗಿಸುವಂತಾಗಿದೆ.

ABOUT THE AUTHOR

...view details