ಕರ್ನಾಟಕ

karnataka

ETV Bharat / state

ಕಲಬುರ್ಗಿ ಎಪಿಎಂಸಿ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ.. 1200 ಕ್ವಿಂಟಲ್ ಅಕ್ರಮ​ ಅಕ್ಕಿ ದಾಸ್ತಾನು ಸೀಜ್!!

ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಡವರಿಗೆ ನೀಡಬೇಕಾದ ಅಕ್ಕಿ ಗೋದಾಮಿನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿರೋದು ಯಾರು ಅನ್ನೋದು ತನಿಖೆಯಿಂದಷ್ಟೇ ತಿಳಿಯಬೇಕಿದೆ.

food-dept-raid
ಆಹಾರ ಇಲಾಖೆ ಅಧಿಕಾರಿಗಳ ದಾಳಿ

By

Published : May 10, 2020, 8:25 PM IST

ಕಲಬುರಗಿ :ಬಡವರಿಗೆ ಸೇರಬೇಕಾದ ಪಡಿತರ ಧಾನ್ಯ ಕಾಳಸಂತೆಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿರುವುದು ಆಹಾರ ಇಲಾಖೆ ಅಧಿಕಾರಿಗಳ ದಾಳಿ ನಡೆಸಿದ ಬಳಿಕ ಬೆಳಕಿಗೆ ಬಂದಿದೆ.

ಲಾಕ್​ಡೌನ್​ನಿಂದಾಗಿ ಸಂಕಷ್ಟಕ್ಕೀಡಾಗಿದ್ದ ಬಡ ಕುಟುಂಬಗಳಿಗೆ ನೀಡಬೇಕಾಗಿದ್ದ ಅಕ್ಕಿಯನ್ನು ನೆರೆರಾಜ್ಯಗಳಿಗೆ ಮಾರಾಟ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಎಪಿಎಂ​ಸಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳು, 1200 ಕ್ವಿಂಟಲ್ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

ಆಹಾರ ಇಲಾಖೆ ಅಧಿಕಾರಿಗಳ ದಾಳಿ, ಅಕ್ರಮ ಅಕ್ಕಿ ದಾಸ್ತಾನು ಸೀಜ್..

ಘಟನೆಯ ಹಿಂದೆ ಕಾಣದ ಕೈಗಳ ಕೈವಾಡ ಇದೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಡವರಿಗೆ ನೀಡಬೇಕಾದ ಅಕ್ಕಿ ಗೋದಾಮಿನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿರೋದು ಯಾರು ಅನ್ನೋದು ತನಿಖೆಯಿಂದಷ್ಟೇ ತಿಳಿಯಬೇಕಿದೆ.

ABOUT THE AUTHOR

...view details