ಕಲಬುರಗಿ: ಬಿಜೆಪಿ ಸರ್ಕಾರದಲ್ಲಿ ಪಶು ಸಂಗೋಪನಾ ಸಚಿವರಾಗಿದ್ದ ರೇವೂನಾಯಕ ಬೆಳಮಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಬಂಜಾರ ಸಮುದಾಯದ ಪ್ರಭಾವಿ ಮುಖಂಡರೆಂದು ಇವರು ಗುರುತಿಸಿಕೊಂಡಿದ್ದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಶಾಸಕ ಪ್ರಿಯಾಂಕ್ ಖರ್ಗೆ, ಶಾಸಕಿ ಕನಿಜ್ ಫಾತಿಮಾ, ಮಾಜಿ ಸಚಿವ ಶರಣಪ್ರಕಾಶ್ ಪಾಟೀಲ್, ಅಲ್ಲಮಪ್ರಭು ಪಾಟೀಲ್, ತಿಪ್ಪಣ್ಣಪ್ಪ ಕಮಕನೂರ್, ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಜಗದೇವ ಗುತ್ತೇದಾರ್ ಅವರು ಬೆಳಮಗಿ ಅವರಿಗೆ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು.
ಬಿಜೆಪಿಯಿಂದ ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದ ಇವರು ಸರ್ಕಾರದಲ್ಲಿ ಸಚಿವರಾಗಿದ್ದರು. ಕಳೆದ ಬಾರಿ ಇದೇ ಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್ ಸಿಗದಿದ್ದಾಗ ಜೆಡಿಎಸ್ ಸೇರಿದ್ದರು. ವಿಧಾನಸಭೆ ಚುನಾವಣೆಯ ನಂತರ ಯಾವುದೇ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳದೇ ತಟಸ್ಥರಾಗಿದ್ದ ರೇವೂನಾಯಕ ಇತ್ತೀಚೆಗೆ ಕಾಂಗ್ರೆಸ್ ನಾಯಕರೊಂದಿಗೆ ಕಾಣಿಸಿಕೊಳ್ಳುತ್ತಿದ್ದರು. ಹೀಗಾಗಿ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು.
ಇದನ್ನೂ ಓದಿ:ಬಿಜೆಪಿ ಹಿರಿಯ ನಾಯಕ ಜೈನಾರಾಯಣ ವ್ಯಾಸ್ ಕಾಂಗ್ರೆಸ್ ಸೇರ್ಪಡೆ.. ಚುನಾವಣೆ ಹೊತ್ತಲ್ಲಿ ಶಾಕ್