ಕರ್ನಾಟಕ

karnataka

ETV Bharat / state

ಕ್ಲಬ್​ಗಳ ಮೂಲಕ ಶಾಸಕರು ಕಾನೂನು ಸುವ್ಯವಸ್ಥೆ ಹದಗೆಡಿಸುತ್ತಿದ್ದಾರೆ: ಶರಣಪ್ರಕಾಶ ಪಾಟೀಲ ಆರೋಪ - Dr. Saranaprakash Patil

ಗುಂಡೇಪಲ್ಲಿ ಗ್ರಾಮದಲ್ಲಿ ಕಾನೂನು ಬಾಹಿರವಾಗಿ ಬಿಜೆಪಿ ಕಾರ್ಯಕರ್ತರೇ ಕ್ಲಬ್ ಆರಂಭಿಸಿದ್ದಾರೆ. ಈ ಮೂಲಕ ಮುಂದಿನ ಯುವ ಪೀಳಿಗೆ ದಾರಿ ತಪ್ಪಲು ಶಾಸಕರೇ ದಾರಿ ಮಾಡಿಕೊಟ್ಟಂತಾಗಿದೆ ಎಂದು ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಆರೋಪಿಸಿದ್ದಾರೆ.

ಸೇಡಂ
ಪದಗ್ರಹಣ ಸಮಾರಂಭ

By

Published : Jan 23, 2021, 5:41 PM IST

ಸೇಡಂ: ತಾಲೂಕಿನಲ್ಲಿ ಕಾನೂನು ಬಾಹಿರವಾಗಿ ಕ್ಲಬ್​ಗಳನ್ನು ಆರಂಭಿಸುವವರಿಗೆ ಬೆಂಬಲಿಸುವ ಮೂಲಕ ಕಾನೂನು ಸುವ್ಯವಸ್ಥೆ ಹದಗೆಡಿಸಲು ಸೇಡಂ ಶಾಸಕರು ಮುಂದಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರರು ಹಾಗೂ ಮಾಜಿ‌ ಸಚಿವ ಡಾ.ಶರಣಪ್ರಕಾಶ ಪಾಟೀಲ ಆರೋಪಿಸಿದ್ದಾರೆ.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ ಅವರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ತಮ್ಮ ಅವಧಿಯಲ್ಲಿ ತಾಲೂಕಿನಲ್ಲಿ ಯಾವುದೇ ರೀತಿಯ ಅನೈತಿಕ‌ ಚಟುವಟಿಕೆಗಳಿಗೆ ಆಸ್ಪದ ನೀಡಿರಲಿಲ್ಲ. ಆದರೆ ಈಗ ಕ್ಲಬ್​​ಗಳು, ಅಕ್ರಮ ಮರಳುಗಾರಿಕೆ ಹಾಗೂ ‌ಮಟ್ಕಾ ದಂಧೆಗಳು ಅವ್ಯಾಹತವಾಗಿ ನಡೆದಿವೆ ಎಂದು ದೂರಿದರು.

ಮಾಜಿ‌ ಸಚಿವ ಡಾ.ಶರಣಪ್ರಕಾಶ ಪಾಟೀಲ

ಗುಂಡೇಪಲ್ಲಿ ಗ್ರಾಮದಲ್ಲಿ ಕಾನೂನು ಬಾಹಿರವಾಗಿ ಬಿಜೆಪಿ ಕಾರ್ಯಕರ್ತರೇ ಕ್ಲಬ್ ಆರಂಭಿಸಿದ್ದಾರೆ. ಈ ಮೂಲಕ ಮುಂದಿನ ಯುವ ಪೀಳಿಗೆ ದಾರಿ ತಪ್ಪಲು ಶಾಸಕರೇ ದಾರಿ ಮಾಡಿಕೊಟ್ಟಂತಾಗಿದೆ. ಅವ್ಯಾಹತವಾಗಿ ನಡೆಯುತ್ರಿರುವ ಅಕ್ರಮ ಮರಳುಗಾರಿಕೆಯಿಂದ ಸಂಪನ್ಮೂಲ ಮತ್ತು ಪರಿಸರ ನಾಶವಾಗುತ್ತಿದೆ ಎಂದರು.

ಬರುವ ದಿನಗಳಲ್ಲಿ ತಾಲೂಕಿನಲ್ಲಿ ನಡೆಯುವ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮೇಲಧಿಕಾರಿಗಳೊಂದಿಗೆ ಸಂಪರ್ಕಿಸಿದ್ದೇನೆ. ಕಾರ್ಯಕರ್ತರೂ ಸಹ ಅನಧಿಕೃತ ಮತ್ತು ಅನೈತಿಕ ಚಟುವಟಿಕೆಗಳ ವಿರುದ್ಧ ಹೋರಾಡಬೇಕು ಎಂದು ಕರೆ ನೀಡಿದರು.

ಇದೇ ವೇಳೆ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನಾಗೇಶ್ವರರಾವ್​ ಮಾಲಿ ಪಾಟೀಲ ನೂತನ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ‌ ಅವರಿಗೆ ಕಾಂಗ್ರೆಸ್ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ABOUT THE AUTHOR

...view details