ಕಲಬುರಗಿ:ನನಗೆ ಮಂತ್ರಿ ಸ್ಥಾನ ಕೊಡುವುದು, ಬಿಡುವುದು ಪಕ್ಷದ ನಾಯಕರಿಗೆ ಬಿಟ್ಟ ವಿಷಯ ಎಂದು ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ಹೇಳಿದರು.
ಎಲ್ಲರನ್ನು ಮಂತ್ರಿ ಮಾಡಲು ಸಾಧ್ಯವಿಲ್ಲ, ಇದನ್ನು ನಾವು ಅರ್ಥ ಮಾಡಿಕೊಳ್ಳಬೇಕು: ಮಾಲಿಕಯ್ಯ ಗುತ್ತೇದಾರ್ - Minister post
ನಮ್ಮಲ್ಲಿರುವ ಎಲ್ಲರನ್ನೂ ಮಂತ್ರಿ ಮಾಡಲು ಸಾಧ್ಯವಿಲ್ಲ. ಇದನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ. ನನಗೆ ಮಂತ್ರಿ ಸ್ಥಾನ ಕೊಡುವುದು, ಬಿಡುವುದು ಪಕ್ಷದ ನಾಯಕರಿಗೆ ಬಿಟ್ಟ ವಿಷಯ ಎಂದು ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರೆಂದು ಮೆರೆಯುತ್ತಿದ್ದವರಿಗೆ ಸೋಲುಣಿಸಿ ಮನೆಗೆ ಕಳುಹಿಸಿ ತೋರಿಸಿದ್ದೇವೆ ಎಂದು ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ಸೋಲಿನ ವಿಚಾರ ಪ್ರಸ್ತಾಪ ಮಾಡಿದರು. ಸಿಎಂ ಯಡಿಯೂರಪ್ಪನವರ ನೇತೃತ್ವದ ಸರಕಾರ ಉತ್ತಮ ಕೆಲಸ ಮಾಡುತ್ತಿದೆ. ಜಿಲ್ಲೆಗೆ ಪ್ರಾತಿನಿಧ್ಯಕ್ಕಾಗಿ ಮನವಿ ಸಲ್ಲಿಸಿದ್ದೇವೆ. ಈಗಲೇ ನಿರಾಶರಾಗುವದು ಬೇಡ. ಮುಂದಿನ ದಿನಗಳಲ್ಲಿ ಈ ಭಾಗಕ್ಕೂ ಮಂತ್ರಿ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮಲ್ಲಿರುವ ಎಲ್ಲರನ್ನೂ ಮಂತ್ರಿ ಮಾಡಲು ಸಾಧ್ಯವಿಲ್ಲ. ಇದನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ. ಕಾಂಗ್ರೆಸ್, ಜೆಡಿಎಸ್ನ ಕೆಲವು ಶಾಸಕರು ರಾಜೀನಾಮೆ ನೀಡಿದ್ದರಿಂದಲೇ ನಮಗೆ ಸರ್ಕಾರ ರಚನೆ ಮಾಡಲು ಸಾಧ್ಯವಾಗಿದೆ. ಹಾಗಾಗಿ ಆ ಶಾಸಕರೂ ಮಂತ್ರಿ ಸ್ಥಾನಕ್ಕೆ ಅರ್ಹರಿದ್ದಾರೆ. ಬರುವ ದಿನಗಳಲ್ಲಿ ಅವರಿಗೂ ಮಂತ್ರಿ ಮಂಡಲದಲ್ಲಿ ಅವಕಾಶ ಕಲ್ಪಿಸಬೇಕಿದೆ ಎಂದರು.