ಕಲಬುರಗಿ: ಜಿಲ್ಲೆಯಲ್ಲಿ ಬಿಜೆಪಿಯವರು ಅಧಿಕಾರ ದುರುಪಯೋಗ ಪಡೆಸಿಕೊಂಡು ಕಾಂಗ್ರೆಸ್ ಹತ್ತಿಕ್ಕಲು ಪ್ರಯತ್ನ ಮಾಡುತ್ತಿದ್ದಾರೆ. ರಾಜಕೀಯ ದುರುದ್ದೇಶದಿಂದ ನನ್ನ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಮಾಜಿ ಸಚಿವ ಶರಣಪ್ರಕಾಶ್ ಪಾಟೀಲ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ದುರುದ್ದೇಶದಿಂದಲೇ ನನ್ನ ಮೇಲೆ ಪ್ರಕರಣ: ಮಾಜಿ ಸಚಿವ ಶರಣಪ್ರಕಾಶ್ ಪಾಟೀಲ್ ಆರೋಪ - ಶರಣಪ್ರಕಾಶ್ ಪಾಟೀಲ್ ಆಕ್ರೋಶ
ಕಲಬುರಗಿಯಲ್ಲಿ ನಿಷೇಧಾಜ್ಞೆ ಉಲ್ಲಂಘನೆ ಆರೋಪದಡಿ ಸುಲೇಪೇಟ್ ಪೊಲೀಸ್ ಠಾಣೆಯಲ್ಲಿ ಶರಣಪ್ರಕಾಶ್ ಪಾಟೀಲ್ ಸೇರಿ 23 ಜನರ ವಿರುದ್ದ ಪ್ರಕರಣ ದಾಖಲಾಗಿದೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಕಳೆದ 13 ರಂದು ಸುಲೇಪೇಟ್ನಲ್ಲಿ ನಾನು ಜನರ ಸಮಸ್ಯೆಗಳನ್ನು ಆಲಿಸಲು ಹೋಗಿದ್ದೆ. ಕೇವಲ 10 ನಿಮಿಷಗಳ ಕಾಲ ಮಾತ್ರ ಜನರನ್ನ ಭೇಟಿ ಮಾಡಿದ್ದೆ. ಆದ್ರೆ ಸುಖಾ-ಸುಮ್ಮನೆ ಸಭೆ ನಡೆಸಿದ್ದೇನೆ, ಲಾಕ್ಡೌನ್ ನಿಷೇಧಾಜ್ಞೆ ನಿಯಮ ಉಲ್ಲಂಘನೆ ಮಾಡಿದ್ದೇನೆ ಎಂದು ಪ್ರಕರಣ ದಾಖಲಿಸಲಾಗಿದೆ.
ಇದರ ಹಿಂದೆ ಸೇಡಂ ತಾಲೂಕಿನ ಶಾಸಕರ ಕೈವಾಡ ಇದೆ ಎಂದು ಸೇಡಂ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ ವಿರುದ್ಧ ಆರೋಪಿಸಿದರು. ಬಿಜೆಪಿಯವರು ಕೊರೊನಾ ವಿಷಯದಲ್ಲೂ ರಾಜಕೀಯ ಮಾಡುತ್ತಿದ್ದಾರೆ. ನನ್ನ ಮೇಲೆ ಪ್ರಕರಣ ದಾಖಲಿಸಿದರೆ ನಾನು ಹೆದರುವುದಿಲ್ಲ ಎಂದು ಇದೇ ವೇಳೆ ತಿರುಗೇಟು ನೀಡಿದ್ದಾರೆ.