ಸೇಡಂ (ಕಲಬುರಗಿ):ಕೊರೊನಾ ಹಿನ್ನೆಲೆ ಗ್ರಾಮೀಣ ಭಾಗದ ಜನರ ಆರೋಗ್ಯ ವಿಚಾರಿಸಲು ಖುದ್ದು ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಸೇಡಂನ ಹಲವು ಗ್ರಾಮಗಳಿಗೆ ಭೇಟಿ ನೀಡಿದರು. ಸೇಡಂನ ಕುರಕುಂಟಾ, ಮದಕಲ ಹಾಗೂ ಮತಕ್ಷೇತ್ರ ವ್ಯಾಪ್ತಿಯ ಕೆಲ ಗ್ರಾಮಗಳಿಗೆ ತೆರಳಿದ ಅವರು, ಕೊರೊನಾ ವೈರಸ್ನ ಬಗ್ಗೆ ಜಾಗೃತಿ ಮೂಡಿಸಿದರು. ಅಲ್ಲದೆ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮಾಹಿತಿ ಪಡೆದು ಅಧಿಕಾರಿಗಳಿಗೆ ಸಮಸ್ಯೆ ಪರಿಹರಿಸುವಂತೆ ಸೂಚಿಸಿದರು.
ಮನೆ ಮನೆಗೆ ತೆರಳಿ ಗ್ರಾಮಸ್ಥರ ಆರೋಗ್ಯ ವಿಚಾರಿಸಿದ ಮಾಜಿ ಸಚಿವ ಶರಣಪ್ರಕಾಶ್ ಪಾಟೀಲ್ - Awareness against Corona
ಕೊರೊನಾ ಭೀತಿ ಹಿನ್ನೆಲೆ ಗ್ರಾಮೀಣ ಭಾಗದ ಜನರ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಈ ನಡುವೆ ಸೇಡಂನ ಹಲವು ಗ್ರಾಮಗಳಿಗೆ ಮಾಜಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಭೇಟಿ ನೀಡಿ ಗ್ರಾಮಸ್ಥರ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೆ ಯಾವುದೇ ಸಮಸ್ಯೆ ಎದುರಾದರೂ ತಮ್ಮ ಗಮನಕ್ಕೆ ತರುವಂತೆ ಗ್ರಾಮಸ್ಥರಿಗೆ ಸೂಚಿಸಿದರು.
ಮನೆ ಮನೆಗೆ ತೆರಳಿ ಗ್ರಾಮಸ್ಥರ ಆರೋಗ್ಯ ವಿಚಾರಿಸಿದ ಮಾಜಿ ಸಚಿವ ಶರಣಪ್ರಕಾಶ್ ಪಾಟೀಲ್
ಕೊರೊನಾ ವಿರುದ್ಧ ಹೋರಾಡಲು ಸರ್ಕಾರದ ನಿಯಮಗಳನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು. ಉದ್ಯೋಗ ಖಾತ್ರಿಯಡಿ ಪ್ರತಿಯೊಬ್ಬರಿಗೂ ಉದ್ಯೋಗ ದೊರೆಯುವಂತಾಗಬೇಕು. ಯಾವುದೇ ಸಮಸ್ಯೆ ಉಲ್ಬಣಿಸಿದರೆ ತಕ್ಷಣವೇ ಅಧಿಕಾರಿಗಳ ಹಾಗೂ ತಮ್ಮ ಗಮನಕ್ಕೆ ತರುವಂತೆ ಕೋರಿದರು.