ಸೇಡಂ (ಕಲಬುರಗಿ) :ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಮಗ ವಿಜಯೇಂದ್ರ ಜನರ ಹಣ ಲೂಟಿ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ, ಕೆಪಿಸಿಸಿ ಮಾಧ್ಯಮ ವಕ್ತಾರ ಡಾ. ಶರಣಪ್ರಕಾಶ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ.
ಯಡಿಯೂರಪ್ಪ, ವಿಜಯೇಂದ್ರ ಸೇರಿ ಲೂಟಿಗಿಳಿದಿದ್ದಾರೆ.. ಡಾ. ಶರಣಪ್ರಕಾಶ ಪಾಟೀಲ್ ಆರೋಪ - KPCC Media Spokesperson Saranaprakash Patil
ಸಿಎಂ ಮಗ ವಿಜಯೇಂದ್ರ ಲಂಚ ಪಡೆದು ಅಧಿಕಾರಿಗಳ ವರ್ಗಾವಣೆ ಹಾಗೂ ಕಾಮಗಾರಿ ಮಂಜೂರು ಮಾಡುತ್ತಿದ್ದಾರೆ. ಯಡಿಯೂರಪ್ಪ ತಮ್ಮ ಮಗ ವಿಜಯೇಂದ್ರನ ಕೈಗೊಂಬೆಯಾಗಿದ್ದಾರೆ..
ಮಾಜಿ ಸಚಿವ ಶರಣಪ್ರಕಾಶ ಪಾಟೀಲ್
ಸೇಡಂನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಮಗ ವಿಜಯೇಂದ್ರ ಲಂಚ ಪಡೆದು ಅಧಿಕಾರಿಗಳ ವರ್ಗಾವಣೆ ಹಾಗೂ ಕಾಮಗಾರಿ ಮಂಜೂರು ಮಾಡುತ್ತಿದ್ದಾರೆ. ಯಡಿಯೂರಪ್ಪ ತಮ್ಮ ಮಗ ವಿಜಯೇಂದ್ರನ ಕೈಗೊಂಬೆಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಕೋವಿಡ್ ಸಮಯದಲ್ಲೂ ಸಹ ಲಂಚಗುಳಿತನ ಪ್ರದರ್ಶಿಸಿರುವುದು, ರಾಜ್ಯದಲ್ಲಿ ಸರ್ಕಾರ ಇದ್ದೂ ಸತ್ತಂತಾಗಿದೆ ಎಂದು ಗುಡುಗಿದ್ದಾರೆ.